ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಬೆಸ್ಕಾಂ

ಬೆಂಗಳೂರು

ಬೆಂಗಳೂರು: ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರಿನಲ್ಲಿ ಒಂದೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಇನ್ನೊಂದೆಡೆ ನಿರ್ವಹಣಾ ಕಾಮಗಾರಿಯಿಂದಾಗಿ ಬೆಂಗಳೂರಿನ ಹಲವು ಭಾಗಗಳಲ್ಲಿ ಇಂದು ವಿದ್ಯುತ್ ಪೂರೈಕೆ ಕಡಿತಗೊಳ್ಳಲಿದೆ. ಮಳೆಯ ಆರ್ಭಟ ನಡುವೆ ಪವರ್ ಕಟ್​ನಿಂದಾಗಿ ಬೆಂಗಳೂರಿನ ಜನರು ಪರದಾಡಬೇಕಾದ ಸ್ಥಿತಿಯಿದೆ. ವಾರಾಂತ್ಯವಾದ ಇಂದು  ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕರೆಂಟ್ ಇರುವುದಿಲ್ಲ

. ಅದರಂತೆ ನಗರದ ರೆಸಿಡೆನ್ಸಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ಲ್ಯಾವೆಲ್ಲೆ ರಸ್ತೆ 6ನೇ ಕ್ರಾಸ್, ವಿಠಲ್ ಮಲ್ಯ ರಸ್ತೆ, ಚರ್ಚ್ ಸ್ಟ್ರೀಟ್, ಕಸ್ತೂರ್​ಬಾ ರಸ್ತೆ, ಎಂಜಿ ರಸ್ತೆ, ಲ್ಯಾವೆಲ್ಲೆ ರಸ್ತೆ 7ನೇ ಕ್ರಾಸ್, ಸೇಂಟ್ ಮಾರ್ಕ್ಸ್ ರಸ್ತೆ, ಕ್ವೀನ್ಸ್ ವೃತ್ತ, ಸೇಂಟ್ ಮಾರ್ಕ್ಸ್ ರಸ್ತೆ ರೆಸಿಡೆನ್ಸಿ ರಸ್ತೆಯಲ್ಲಿ ಕರೆಂಟ್ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *