‘ಜೇಮ್ಸ್’ ಹಬ್ಬಕ್ಕೆ ದಿನಗಣನೆ ಶುರು: ಬಿಡುಗಡೆಗೂ ಮುನ್ನವೇ ಅಭಿಮಾನಿಗಳ ಸಂಭ್ರಮಾಚರಣೆ

ಚಲನಚಿತ್ರ

ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದ್ದು, ಬಿಡುಗಡೆಗೂ ಮುನ್ನ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಬೆಂಗಳೂರಿನ ಕಮಲಾನಗರದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ  ಅಪ್ಪು ಕಟೌಟ್ ಗಳನ್ನು ನಿರ್ಮಿಸಿದ್ದು, ಅಭಿಮಾನಿಗಳು ಪೂಜೆ ಸಲ್ಲಿಸಿ ಗೌರವಿಸಿದ್ದಾರೆ. ಡಾ. ರಾಜ್ ಕುಮಾರ್, ಪಾರ್ವತಮ್ಮ ಹಾಗೂ ಅಪ್ಪುವಿನ ಕಟೌಟ್ ಗಳನ್ನು ಹಾಕಲಾಗಿದ್ದು, ಜೇಮ್ಸ್ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Leave a Reply

Your email address will not be published. Required fields are marked *