ಹಾಸನ: ಸಿಲಿಂಡರ್ ಬೆಲೆ ಸೇರಿದಂತೆ ದಿನನಿತ್ಯ ಬಳಸುವ ಅಗತ್ಯ ಪದಾರ್ಥಗಳ ಬೆಲೆ ಏರಿಕೆ ವಿರೋಧಿಸಿ ರಾಜ್ಯ- ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಕಾಂಗ್ರೆಸ್ ಕಚೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಡಿಸಿ ಕಛೇರಿ ಆವರಣಕ್ಕೆ ಬಂದ ಅವರು, ೪೦ಪರ್ಸೆಂಟ್ ಕಮಿಷನ್ ಸಿಲೆಂಡರ್, ಅಗತ್ಯ ಬೆಲೆ ಏರಿಕೆ: ಕಾಂಗ್ರೆಸ್ ಪ್ರತಿಭಟನೆ ಬಿಜೆಪಿಯಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಕ್ಷಣೆ: ಆಕ್ರೋಶ ಸರಕಾರ ಮತ್ತು ಬಡವರ ವಿರೋಧಿ ಸರ್ಕಾರ ಎಂದು ಕಾಂಗ್ರೆಸ್ ಕಾರ್ಯಕರ್ತರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲ ಕಾಲ ಧರಣಿ ನಡೆಸಿದರು.
ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ್ ಮತ್ತು ಜಿಲ್ಲಾ ಘಟಕದ ವಕ್ತಾರ ಮತ್ತು ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ಮತ್ತು ಬನವಾಸೆ ರಂಗಸ್ವಾಮಿ ಮಾತನಾಡುತ್ತಾ, ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಚಾರದ ಬಗ್ಗೆ ಸಾಮಾನ್ಯ ಜನರು ಕೂಡ ತತ್ತರಿಸಿ ಹೋಗಿರುವ ಕಾಲದಲ್ಲಿ ಗ್ಯಾಸ್ ಬೆಲೆ ಗಗನಕ್ಕೇರಿದೆ. ನಮ್ಮ ಕಾಂಗ್ರೆಸ್ ಆಡಳಿತದಲ್ಲಿ ೪೨೫ ರೂಗಳು ಇದ್ದ ಸಿಲೆಂಡರ್ ಬೆಲೆಯನ್ನು ಇಂದು ೧೦೫೦ ರೂಗಳಿಗೆ ಏರಿಕೆ ಮಾಡಿ ಸಬ್ಸಿಡಿ ಕೊಡುವುದಾಗಿ ಹೇಳಿ ಎಲ್ಲಾವನ್ನು ನಿಲ್ಲಿಸಲಾಗಿದೆ. ಉಚಿತ ಗ್ಯಾಸ್ ನೀಡುವುದಾಗಿ ಹಾಗೂ ಯಾವುದೋ ಸ್ಟವ್ ಕಂಪನಿಗೆ ಉಪಯೋಗವಾಗಲಿ ಎಂದು ನರೇಂದ್ರ ಮೋದಿಯವರು ಜನರಿಗೆ ಸುಳ್ಳು ಭರವಸೆ ನೀಡಿದ್ದಾರೆ ಎಂದು ದೂರಿದರು.
ಕಚ್ಚಾ ತೈಲ ಬೆಲೆ ಕುಸಿದರೂ ಅಡುಗೆ ಅನಿಲ ಸಿಲಿಂಡರ್ಗಳ ಬೆಲೆಯನ್ನು ಹಾಗೂ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಗಳನ್ನು ಮೇಲಿಂದ ಮೇಲೆ ಏರಿಕೆ ಮಾಡುತ್ತಾ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಲೋಕಾಯುಕ್ತ ದಾಳಿಯಲ್ಲಿ ಪ್ರಶಾಂತ್ ಮಾಡಾಳ್ ಅವರು ಲಂಚ ಸ್ವೀಕರಿಸುತ್ತಿರುವುದು ಸಾಕ್ಷಿ ಸಮೇತ ಸಾಬೀತಾಗಿದೆ. ಅಲ್ಲದೇ ಅವರ ಮನೆ ಮೇಲೆ ದಾಳಿ ನಡೆಸಿದಾಗಲೂ ಸುಮಾರು ೮ ಕೋಟಿ ೧೨ ಲಕ್ಷರೂ. ಅನಧಿಕೃತ ಹಣ ಮತ್ತು ೪ ಕೆಜಿ ಚಿನ್ನ ಪತ್ತೆಯಾಗಿದೆ. ಇಷ್ಟಾದರೂ ಬೊಮ್ಮಾಯಿ ಸರ್ಕಾರ ಶಾಸಕ ಮಾಡಾಳ್ ವಿರೂಪಾಕ್ಷ ಅರನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದು, ಈ ಕೂಡಲೇ ಶಾಸಕರನ್ನು ಸಹ ಬಂಧನ ಮಾಡಬೇಕು ಎಂದು ಆಗ್ರಹಿಸಿದರು.