ಚಾಮರಾಜನಗರ: ಏ.9ಕ್ಕೆ ಬಂಡೀಪುರಕ್ಕೆ ಪ್ರಧಾನಿ ನರೇಂದ್ರಮೋದಿ ಆಗಮನ ನೀತಿ ಸಂಹಿತೆ ಸ್ಪಷ್ಟ ಉಲ್ಲಂ ಘನೆಯಾಗುತ್ತದೆ. ಆದ್ದರಿಂದ ಚುನಾವಣಾ ಆಯೋಗ ಪ್ರಧಾನಿ ಭೇಟಿ ಕಾರ್ಯಕ್ರ ಮವನ್ನು ರದ್ದುಗೊಳಿಸಬೇಕು ಎಂದು ಚಾಮರಾಜನಗರ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಡಾ.ಗುರುಪ್ರಸಾದ್ ಹೇಳಿದರು.
ಚುನಾವಣೆ ಹೊಸ್ತಿಲಲ್ಲಿ ಬಂಡೀಪುರಕ್ಕೆ ಆಗಮಿಸಿ ಮಾವುತರಿಗೆ ಸನ್ಮಾನ ಮಾಡುವುದು ನೀತಿ ಸಂಹಿತೆ ಉಲ್ಲಂಘಿಸಿದಂತೆ ಆಗುತ್ತದೆ. ಈ ಸಂಬಂಧ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ. ಅಲ್ಲದೇ ಇ ಮೇಲ್ ಮೂಲಕ ಕಮಿಷನರ್ಗೂ ದೂರು ಸಲ್ಲಿಸಲಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ನರೇಂದ್ರಮೋದಿ ಅವರು ಬಿಜೆಪಿಯ ರಾಷ್ಟ್ರ ನಾಯಕರಾಗಿದ್ದ ಚುನಾವಣೆ ಸಂದರ್ಭ ದಲ್ಲಿ ಭೇಟಿ ನೀಡುವುದು ಅವರ ಕಡೆ ಅಲೆ ಹೋಗುವ ಸಂಭವ ಇರುತ್ತದೆ. ಸಾಮಾನ್ಯ ಜನರ ಮೇಲೆ ಪ್ರಭಾವ ಆಗುವುದನ್ನು ತಡೆಯಲು ಆಯೋಗ ಮುಂದಾಗಬೇಕು. ಕೊಡಗಿನಲ್ಲಿ ಭೂ ಕುಸಿತ, ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯಾದಾಗ ಬಾರದ ನರೇಂದ್ರಮೋದಿ ಅವರು ಚುನಾವಣೆ ಸಂದರ್ಭದಲ್ಲಿ ಬರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ನರೇಂದ್ರ ಮೋದಿ ಆಗಮನದಿಂದ ಈಗ ತಾನೇ ಬೆಳೆಯುತ್ತಿರುವ ಹಾಗೂ ಪಕ್ಷೇತರವಾಗಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಹೊಡೆತ ಆಗುತ್ತದೆ. ಚುನಾವಣಾಧಿಕಾರಿಗಳು ಸೂಕ್ಷ್ಮವಾಗಿ ಗಮನಿಸಬೇಕು. ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸಬೇಕು. ಸ್ವಸ್ಥ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾದಂತಾಗುತ್ತದೆ. ಚುನಾವಣೆ ಮುಗಿದ ಬಳಿಕ ಪ್ರಧಾನಿ ಆಗಮನಕ್ಕೆ ಅವಕಾಶ ಕಲ್ಪಿಸಲಿ ಎಂದರು.
ಸುದ್ದಿಗೋಷ್ಟಿಯಲ್ಲಿ ಎಎಪಿ ಜಿಲ್ಲಾ ಉಪಾಧ್ಯಕ್ಷ ಮಹದೇವಸ್ವಾಮಿ, ಸಂಘಟನಾ ಕಾರ್ಯದರ್ಶಿ ಹರೀಶ್, ಬ್ಲಾಕ್ ಸಮಿತಿ ಅಧ್ಯಕ್ಷ ನಾಗೇಶ್, ಗ್ರಾಮೀಣ ಘಟಕದ ಅಧ್ಯಕ್ಷ ಪುಟ್ಟರಾಜು ಇದ್ದರು.