ಬೆಂಗಳೂರು:- ಬಿಯರ್ ಪ್ರಿಯರಿಗೆ ದರ ಏರಿಕೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚಳಕ್ಕೆ ಪ್ರಸ್ತಾಪ ಮಾಡಲಾಗಿದೆ.
ಒಂದು ವೇಳೆ ಇದು ನಿಜವಾದಲ್ಲಿ ಪ್ರತಿ 650 ಮಿಲಿ ಬಿಯರ್ ಬಾಟಲಿಗೆ 8-10 ರೂ. ವರೆಗೆ ದರ ಹೆಚ್ಚಾಗಲಿದೆ. ‘ಕರ್ನಾಟಕ ಅಬಕಾರಿ ನಿಯಮಗಳು, 1968’ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದ್ದು, ಇದರಲ್ಲಿ ದರ ಹೆಚ್ಚಳವನ್ನು ಪ್ರಸ್ತಾಪಿಸಲಾಗಿದೆ. ದರ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ.
ಬಿಯರ್ ಮಾರಾಟದಲ್ಲಿ ದೊಡ್ಡ ಮಟ್ಟದ ಬೆಳವಣಿಗೆ ಕಂಡುಬಂದಿರುವುದರಿಂದ ಆ ಮೂಲದಿಂದ ಹೆಚ್ಚು ಆದಾಯ ಸಂಗ್ರಹಿಸುವ ನಿಟ್ಟಿನಲ್ಲಿ ಸರ್ಕಾರವು ಸುಂಕವನ್ನು ಹೆಚ್ಚಿಸುವತ್ತ ಮನ ಮಾಡಿದೆ.