ಬೆಂಗಳೂರು: ನಗರದ ಪ್ರಮುಖ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಒಂದಾಗಿರುವ ಕೆ.ಸಿ ಜನರಲ್ ಆಸ್ಪತ್ರೆ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ.
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 150 ಕೋಟಿ ರೂಪಾಯಿ ವೆಚ್ಚದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಯಾಗಿದ್ದು ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ.
ನಿಟ್ಟಿನಲ್ಲಿ 150 ಕೋಟಿ ಅನುದಾನ ಮೀಸಲಿಡಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದಿದ್ದಾರೆ.