ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ 5 ಅಂತಸ್ತಿಗೂ ಅಧಿಕ ಕಟ್ಟಡಗಳ ನಿರ್ಮಾಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಡೆ ನೀಡಿದೆ.
ಈ ಬಗ್ಗೆ ಮಾತಾಡಿರುವ BBMP ಆಯುಕ್ತ ತುಷಾರ್ ಗಿರಿನಾಥ್, ನಗರ ಯೋಜನೆ ನಿಯಮ ಉಲ್ಲಂಘಿಸಿ ಹಲವು ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಿರುವ ಆರೋಪ BBMP ವಿರುದ್ಧ ಕೇಳಿ ಬಂದಿದೆ. ಜೊತೆಗೆ ಬೆಂಗಳೂರಿನಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗದೆ ಪ್ರವಾಹ ಪರಿಸ್ಥಿತಿ ಉಂಟಾಗಲು ಇದೇ ಕಾರಣ ಅಂತ ಹೇಳಲಾಗಿದೆ. ಹೀಗಾಗಿ ಕೆಲ ದಿನಗಳ ಮಟ್ಟಿಗೆ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ತಡೆ ಹಿಡಿಯಲಾಗಿದೆ ಎಂದಿದ್ದಾರೆ.