ನವದೆಹಲಿ: ಮಾಹಿತಿ ತಂತ್ರಜ್ಞಾನದ ಕಾಯ್ದೆ ಅಡಿಯಲ್ಲಿ ಭಾರತದ ನಿಯಮ ಒಪ್ಪಲ್ಲ ಎಂಬ ಕಾರಣ ನೀಡಿ ವಾಟ್ಸಾಪ್ ತನ್ನ ಸೇವೆಗಳನ್ನು ಸ್ಥಗಿತಗೊಳಿಸುತ್ತದೆಯೇ’ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ವೈಷ್ಣವ್̤ ಈ ಬಗ್ಗೆ ಸರ್ಕಾರಕ್ಕೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲವೆಂದು ಲಿಖಿತ ರೂಪದಲ್ಲಿ ಉತ್ತರಿಸಿದ್ದಾರೆ.
ಹೌದು ಭಾರತದಲ್ಲಿ ತನ್ನ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ವಾಟ್ಸಾಪ್ ಆಗಲಿ ಅಥವಾ ಮೂಲ ಸಂಸ್ಥೆ ಮೆಟಾ ಸರ್ಕಾರಕ್ಕೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲವೆಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ, ಸಾಮಾಜಿಕ ಮಾಧ್ಯಮಗಳು ಗೂಢಲಿಪೀಕರಣ ಹೊಂದಿದ್ದರೂ, ಸಂದೇಶಗಳನ್ನು ತುರ್ತು ಸಂದರ್ಭದಲ್ಲಿ ತಮಗೆ ತೋರಿಸಬೇಕು ಎಂದು ಸರ್ಕಾರ ಹೇಳಿತ್ತು. ಆದರೆ ಗೂಢಲಿಪೀಕರಣಕ್ಕೆ ಭಂಗ ಬಂದರೆ ಭಾರತದಲ್ಲಿ ತನ್ನ ಸೇವೆಯನ್ನು ಸ್ಥಗಿತಗೊಳಿಸುವುದಾಗಿ ವಾಟ್ಸಾಪ್ ದೆಹಲಿ ಹೈಕೋರ್ಟ್ಗೆ ತಿಳಿಸಿತ್ತು.