ಖ್ಯಾತ ನಟಿ ರಶ್ಮಿಕಾ ಮಂದಣ್ಣಗೆ ಆಕೆಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರ ವೃತ್ತಿ ಜೀವನದ ಆರಂಭದಿಂದಲೂ ಆಕೆಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಇದೀಗ ಆಕೆಗೆ ಬರೋಬ್ಬರಿ 80 ಲಕ್ಷ ರೂಪಾಯಿ ವಂಚಿಸಿದ್ದಾರೆ.
ರಶ್ಮಿಕಾಗೇ ಗೊತ್ತಿಲ್ಲದಂತೆ ಸುಮಾರು 80 ಲಕ್ಷ ರೂಪಾಯಿಗಳಷ್ಟು ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪ ಮ್ಯಾನೇಜರ್ ಮೇಲೆ ಕೇಳಿಬಂದಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮ್ಯಾನೇಜರ್ ನನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಆದರೆ ಈ ಮ್ಯಾನೇಜರ್ ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ.
ಇಷ್ಟೊಂದು ದೊಡ್ಡ ಮೊತ್ತದ ವಂಚನೆ ಆಗಿದ್ದರೂ ಕೂಡ ರಶ್ಮಿಕಾ ಈ ಪ್ರಕರಣವನ್ನು ಸೈಲೆಂಟ್ ಆಗಿ ಹ್ಯಾಂಡಲ್ ಮಾಡಿದ್ದಾರೆ. ಯಾವುದೇ ಸೀನ್ ಕ್ರಿಯೆಟ್ ಮಾಡದೇ, ಮ್ಯಾನೇಜರ್ ಹುದ್ದೆಯಿಂದ ಆತನನ್ನು ಕಿತ್ತೆಸೆದಿದ್ದಾರೆ ಎನ್ನಲಾಗುತ್ತಿದೆ.