ಬೆಂಗಳೂರು: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ 5ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಕಾಟನ್ ಪೇಟೆ ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದ ಪುನೀತ್ ಕೆರೆಹಳ್ಳಿಯನ್ನ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಂಜೆ ವೇಳೆ ವಿಕ್ಟೋರಿಯಾ ಆಸ್ಪತ್ರೆಯಿಂದ ಕರೆತಂದಿದ್ದ ಪೊಲೀಸರು ಕೋರಮಂಗಲದ ಜ್ಯೂಡಿಷಿಯಲ್ ಬ್ಲಾಕ್ ನಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಈ ವೇಳೆ 5ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಶಿವಕುಮಾರ್ ಅವರು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಸೋಮವಾರ (ಜು.29) ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.