ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 1.50 ಕೋಟಿ ಹಣ ಜಪ್ತಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಚಿಕ್ಕರೇವಣ್ಣ ಬೆಂಬಲಿಗರಿಂದ ರಾಮದುರ್ಗ ತಾಲೂಕಿನ ತುರನೂರು ಬಳಿ ಹಣ ಹಂಚಿಕೆ ಆರೋಪ ಕೇಳಿ ಬಂದಿದೆ.
ನಿನ್ನೆ ಅಪಾರ ಬೆಂಬಲಿಗರ ಜೊತೆ ಚಿಕ್ಕರೇವಣ್ಣ ನಾಮಪತ್ರ ಸಲ್ಲಿಸಿದ್ದರು. ಇನ್ನು ಹಣ ಹಂಚಿಕೆ ಮಾಡುತ್ತಿದ್ದ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಚುನಾವಣಾಧಿಕಾರಿಗಳು ದಾಳಿ ನಡೆಸಿ ಕಾರಿನಲ್ಲಿ ಸಾಗಿಸುತ್ತಿದ್ದ ಒಂದೂವರೆ ಕೋಟಿ ಹಣ ಜಪ್ತಿ ಮಾಡಿದ್ದಾರೆ.