ಜಮ್ಶೆಡ್ಪುರ: ಜಾರ್ಖಂಡ್ನ ಪೂರ್ವ ಸಿಂಗ್ಭೂಮ್ ಜಿಲ್ಲೆಯ ನಾಲ್ಕು ಬಾಲಕಿಯರ ವಸತಿ ಶಾಲೆಗಳಲ್ಲಿ(Jharkhand girls’ school)ನಡೆಸಿದ ಪರೀಕ್ಷೆಯಲ್ಲಿ 148 ವಿದ್ಯಾರ್ಥಿಗಳಿಗೆ ಕೋವಿಡ್ (COVID-19)ತಗುಲಿರುವುದು ದೃಢಪಟ್ಟಿದೆ ಎಂದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 69 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಆಗಿದೆ. ನಂತರ ಜಿಲ್ಲೆಯ ಎಲ್ಲಾ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯ (ಕೆಜಿಬಿವಿ) ಶಾಲೆಗಳಲ್ಲಿ ಕೋವಿಡ್-19 ಪರೀಕ್ಷೆಯನ್ನು ನಡೆಸುವಂತೆ ಜಿಲ್ಲಾಧಿಕಾರಿ ವಿಜಯ ಜಾಧವ್ ಸೂಚಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸಿವಿಲ್ ಸರ್ಜನ್ ಡಾ. ಜುಝಾರ್ ಮಜ್ಹಿ ನೇತೃತ್ವದಲ್ಲಿ ಜಿಲ್ಲೆಯ ದುಮಾರಿಯಾ, ಪೊಟ್ಕಾ ಮತ್ತು ಜಮ್ಶೆಡ್ಪುರ ಬ್ಲಾಕ್ಗಳ ಇತರ ಮೂರು ಕೆಜಿಬಿವಿ ಶಾಲೆಗಳಲ್ಲಿ ವೈದ್ಯರು ಕೋವಿಡ್ ಪರೀಕ್ಷೆಯನ್ನು ನಡೆಸಿದರು. ಈ ವೇಳೆ ಇನ್ನೂ 79 ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿರುವುದು ಪತ್ತೆಯಾಗಿದೆ.
ದುಮಾರಿಯಾದ ಕೆಜಿಬಿವಿಯಲ್ಲಿ 14 ಪ್ರಕರಣಗಳು ದಾಖಲಾಗಿದ್ದರೆ, ಪೊಟ್ಕಾದ ಕೆಜಿಬಿವಿಯಲ್ಲಿ 10 ಮತ್ತು ಜಮ್ಶೆಡ್ಪುರದ ಕೆಜಿಬಿವಿ ಶಾಲೆಯಲ್ಲಿ 55 ಕೋವಿಡ್-19 ಪ್ರಕರಣಗಳು ದಾಖಲಾಗಿವೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಕೊರೊನಾವೈರಸ್ ನಿಯಮಾವಳಿಗಳ ಪ್ರಕಾರ, ಎಲ್ಲಾ ವಿದ್ಯಾರ್ಥಿಗಳನ್ನು ಪ್ರತ್ಯೇಕ ವಾಸದಲ್ಲಿರಿಸಲಾಗಿದೆ ಮತ್ತು ಶಾಲೆಯ ಆವರಣವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ.