ಬಾಲಿವುಡ್ ಖ್ಯಾತ ನಟ ಹಾಗೂ ನಿರ್ದೇಶಕ ಸತೀಶ್ ಕೌಶಿಕ್ ಸಾವು ಹೃದಯಾಘಾತದಿಂದ ಸಂಭವಿಸಿದೆ ಎಂದು ಎಂದು ಹೇಳಲಾಗಿದ್ದು, ಇದೀಗ ಸಾವಿಗೆ ಬೇರೆ ತಿರುವು ನೀಡಲಾಗುತ್ತಿದೆ. ಈ ಸಾವಿನ ಹಿಂದೆ 15 ಕೋಟಿ ರೂಪಾಯಿಗಳಿಗಾಗಿ ನಡೆದ ಕೊಲೆ ಎಂದು ದೂರು ದಾಖಲಾಗಿದೆ.
ದೆಹಲಿ ಮೂಲದ ಉದ್ಯಮಿಯೊಬ್ಬರ ಪತ್ನಿಯು, ತನ್ನ ಪತಿ ಮೇಲೆಯೇ ಈ ಕೊಲೆಯ ಆರೋಪವನ್ನೂ ಮಾಡಿದ್ದಾರೆ. ಕಲೆ ಮಾತ್ರೆಗಳು ನೀಡಿ ಸತೀಶ್ ಅವರನ್ನು ಕೊಲ್ಲಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ದೆಹಲಿ ಪೊಲೀಸ್ ಕಮಿಷನರ್ ಗೆ ದೂರು ನೀಡಿರುವ ಮಹಿಳೆ, ಎರಡು ದಿನಗಳ ಹಿಂದೆ ನಡೆದ ಹೋಳಿ ಆಚರಣೆಗಾಗಿ ಸತೀಶ್ ಫಾರ್ಮ್ ಹೌಸ್ ಗೆ ಬಂದಿದ್ದರು. ಅಲ್ಲಿ ಔಷಧಿ ನೀಡಿ ಕೊಲೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಣದ ವ್ಯವಹಾರಕ್ಕಾಗಿ ಸತೀಶ್ ಮತ್ತು ತಮ್ಮ ಪತಿ ದೆಹಲಿ ಮತ್ತು ದುಬೈನಲ್ಲಿ ಭೇಟಿ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಸತೀಶ್ ಸಾವಿನ ಹಿಂದಿನ ದಿನ ಹೋಳಿ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಆ ಸ್ಥಳದಲ್ಲಿ ಔಷಧಿ ಸಿಕ್ಕಿದೆ ಎಂದು ಗೊತ್ತಾಗಿದೆ.
ಸತೀಶ್ ಸಾವಿನ ಅನುಮಾನದ ಹಿನ್ನೆಲೆಯಲ್ಲಿ ಪೊಲೀಸರು ಹೋಳಿ ಪಾರ್ಟಿಯಲ್ಲಿ ಭಾಗಿಯಾಗಿದ್ದ ಫಾರ್ಮ್ ಹೌಸ್ ಗೆ ಭೇಟಿ ನೀಡಿದ್ದರು. ಪಾರ್ಟಿ ನಡೆದ ಸ್ಥಳದಲ್ಲಿ ಕೆಲವು ಔಷಧಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಸತೀಶ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೂ ಕಳುಹಿಸಿದ್ದರು ಎಂದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.