ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಮಂಡನೆಗೆ ದಿನಗಣನೆ ಆರಂಭವಾಗಿದೆ. ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡಿಸಿಲಿದ್ದು, ಇಂದು ಬಜೆಟ್ ಪೂರ್ವಭಾವಿ ಸಭೆ ನಡೆಸಲಾಯಿತು. 2025ರ ಆಯವ್ಯಯ ಪೂರ್ವಭಾವಿ ಚರ್ಚೆಯಲ್ಲಿ ಪರಿಷತ್ ಶಾಸಕರಾದ ಟಿ.ಎ.ಶರವಣ ಅವರು ಭಾಗಿಯಾಗಿದ್ದು, ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು.
ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆಯಲ್ಲಿ ಭಾಗಿಯಾದ ಕರ್ನಾಟಕ ಜ್ಯುವೆಲರಿ ಅಸೋಸಿಯೇಶನ್ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಅವರು, ಕರ್ನಾಟಕ ಆಭರಣ ವ್ಯಾಪಾರಿಗಳ ಸಂಘದ ಪರವಾಗಿ ಬಹಳ ದಿನಗಳಿಂದ ಬಾಕಿ ಉಳಿದಿರುವ ಕರ್ನಾಟಕ ಮೆಗಾ ಜ್ಯುವೆಲ್ಲರಿ ಪಾರ್ಕ್ ಯೋಜನೆ ಅನುಷ್ಠಾನ ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ಸಭೆಯಲ್ಲಿ ಮಾತನಾಡಿದ ಅವರು ಹಿಂದಿನ ಬಜೆಟ್ನಲ್ಲಿ 200 ಕೋಟಿ ವೆಚ್ಚದಲ್ಲಿ ಕರ್ನಾಟಕ ಮೆಗಾ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣದ ಘೋಷಣೆ ಮಾಡಿತ್ತು. ಆದರೆ ಮೂರು ವರ್ಷಗಳಾದರೂ ಆಗಿಲ್ಲ. ಕರ್ನಾಟಕ ಜ್ಯುವೆಲ್ಲರಿ ಮ್ಯಾನುಫ್ಯಾಕ್ಚರಿಂಗ್ನಲ್ಲಿ ಪ್ರಖ್ಯಾತಿ ಪಡೆದಿದೆ.
ಹೀಗಾಗಿ ತಮಿಳುನಾಡು, ಮಹಾರಾಷ್ಟ್ರ, ಗುಜರಾತ್ ಮತ್ತು ಪಶ್ಚಿಮ ಬಂಗಾಳದಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ ಯಶಸ್ವಿಯಾಗಿದ್ದು, ಅದರಂತೆ ಕರ್ನಾಟಕದಲ್ಲಿ ಈ ರೀತಿ ಮೆಗಾ ಜ್ಯುವೆಲ್ಲರಿ ಪಾರ್ಕ್ವಾದರೆ ಯಶಸ್ವಿಯಾಗುವುದು ಎಂದು ಮೆಗಾ ಜ್ಯುವೆಲ್ಲರಿ ಪಾರ್ಕ್ ಅವಶ್ಯಕತೆಯ ಕುರಿತು ಮನದಟ್ಟು ಮಾಡಿದರು.
