ಬೆಂಗಳೂರು: ರಾಜ್ಯದ ಆರ್ಥಿಕತೆಯು 2023-24ನೇ ಸಾಲಿನಲ್ಲಿ ಶೇ.6.6ರಷ್ಟು (ಸ್ಥಿರ ಬೆಲೆಗಳಲ್ಲಿ) ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಈ ಶ್ಲಾಘನೀಯ ಬೆಳವಣಿಗೆಯು, ದೇಶದ ಆರ್ಥಿಕತೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. 2022-23ಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ GST ತೆರಿಗೆ ಸಂಗ್ರಹಣೆಯು ಶೇ.18ರಷ್ಟು ಹೆಚ್ಚಳ ಕಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
2023-24ರಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಒಟ್ಟು ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯವು 2ನೇ ಸ್ಥಾನದಲ್ಲಿದೆ. ಜನವರಿ ತಿಂಗಳ ಅಂತ್ಯದವರೆಗು 58,180 ಕೋಟಿ ರೂ.ಗಳ SGST ತೆರಿಗೆ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.14 ರಷ್ಟು ಬೆಳವಣಿಗೆಯಾಗಿರುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.