ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 19,968 ಹೊಸ ಕೋವಿಡ್ ಪ್ರಕರಣಗಳು ಪತ್ತೆ..! 673 ಮಂದಿ ಬಲಿ

ರಾಷ್ಟ್ರೀಯ

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ​ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ 19,968 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 673 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಸದ್ಯಕ್ಕೆ 2,24,187ಸಕ್ರಿಯ ಪ್ರಕರಣಗಳಿವೆ. ಕಳೆದೊಂದು ದಿನದಲ್ಲಿ 673 ಮಂದಿ ಮಹಾಮಾರಿ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಒಟ್ಟು 5,11,903 ಜನ ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೆ, ನಿನ್ನೆ 48,847 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,20,86,383 ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರ 1.68% ಇದೆ.

Leave a Reply

Your email address will not be published. Required fields are marked *