ಮೈಸೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆ ಖಾಲಿ ಇದೆ. ಖಾಲಿ ಹುದ್ದೆಗಳ ಭರ್ತಿ ಮಾಡುವ ಕಾರ್ಯ ಶುರುವಾಗಿದೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆ ಖಾಲಿ ಇದೆ. ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್ ಕಾನ್ಸ್ಟೇಬಲ್, 400 ಪಿಎಸ್ಐ ಹುದ್ದೆ ಭರ್ತಿ ಮಾಡಲು ಮುಂದಾಗಿದ್ದೇವೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇದಕ್ಕೂ ಮುನ್ನ ಮೈಸೂರು ಅರಮನೆಗೆ ಕುಟುಂಬಸ್ಥರೊಂದಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದ್ದಾರೆ. ಅರಮನೆ ಆಡಳಿತ ಮಂಡಳಿ ಡಾ.ಪರಮೇಶ್ವರ್ಗೆ ಸ್ವಾಗತ ನೀಡಿ ಮೈಸೂರು ಪೇಟ ತೊಡಿಸಿ ನೆನಪಿನ ಕಾಣಿಕೆ ನೀಡಿದ್ರು. ನೆನಪಿನಾರ್ಥ ಡಾ.ಜಿ.ಪರಮೇಶ್ವರ್ ದಂಪತಿ ಗಂಧದ ಗಿಡ ನೆಟ್ಟರು. ಬಳಿಕ ಪ್ರಮೋದಾದೇವಿ ಒಡೆಯರ್ ಭೇಟಿಯಾದರು.