ಪಾಕಿಸ್ತಾನದ ಉತ್ತರ ವಜಿರಿಸ್ತಾನ್ ಜಿಲ್ಲೆಯ ಮಿರ್ ಅಲಿ ಪ್ರದೇಶದ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದು ದಾಳಿಯಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ಏಳು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇಂಟರ್ ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಉಲ್ಲೇಖಿಸಿ ಡಾನ್ ವರದಿ ಮಾಡಿದೆ.
ಆರು ಭಯೋತ್ಪಾದಕರ ಗುಂಪು ಶನಿವಾರ ಮುಂಜಾನೆ ಉತ್ತರ ವಜಿರಿಸ್ತಾನದ ಮಿರ್ ಅಲಿಯ ಸಾಮಾನ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳ ಪೋಸ್ಟ್ ಮೇಲೆ ದಾಳಿ ನಡೆಸಿದೆ. ಈ ವೇಳೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.
ಆರಂಭಿಕ ದಾಳಿಯಲ್ಲಿ ಮೃತಪಟ್ಟ ಸೈನಿಕರನ್ನು ಹವಿಲ್ದಾರ್ ಸಬೀರ್, ನಾಯಕ್ ಖುರ್ಷಿದ್, ಸಿಪಾಯಿ ನಾಸಿರ್, ಸಿಪಾಯಿ ರಾಜಾ ಮತ್ತು ಸಿಪಾಯಿ ಸಜ್ಜಾದ್ ಎಂದು ಗುರುತಿಸಲಾಗಿದೆ ಎಂದು ಡಾನ್ ವರದಿಯಲ್ಲಿ ಉಲ್ಲೇಖಿಸಿದೆ.