ನವದೆಹಲಿ:- ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ್ರೆ ಇಬ್ಬರು ಹೆಂಡತಿಯರು ಇದ್ದವರಿಗೆ 2 ಲಕ್ಷ ನೆರವು ನೀಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಕಾಂತಿಲಾಲ್ ಹೇಳಿದ್ದಾರೆ.
ಪಕ್ಷವು ಅಧಿಕಾರಕ್ಕೆ ಬಂದರೆ ಪಕ್ಷದ ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ.
ನೀಡಲಾಗುವುದು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿಯೊಬ್ಬ ಮಹಿಳೆಯ ಖಾತೆಗೆ 1 ಲಕ್ಷ ರೂ. ಜಮಾ ಮಾಡಲಾಗುವುದು. ನಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದ್ದು, ಇಬ್ಬರು ಪತ್ನಿಯರಿರುವವರಿಗೆ 2 ಲಕ್ಷ ರೂಪಾಯಿ ನೀಡಲಾಗುವುದು ಎಂದರು. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಜಿತು ಪಟ್ವಾರಿ ಅವರ ಸಮ್ಮುಖದಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. ಕಾಂಗ್ರೆಸ್ನ ಪ್ರಣಾಳಿಕೆಯಂತೆ ಮಹಿಳೆಯರು ಬಡತನ ರೇಖೆಗಿಂತ ಕೆಳಗಿರುವ ವಿಭಾಗದಿಂದ ಹೊರಬರುವವರೆಗೆ ಮಹಾಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 8,500 ರೂ. ನೀಡಲಾಗುವುದು.
ಹಿಂದಿನ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲಯನ್ಸ್ (ಯುಪಿಎ) ಸರ್ಕಾರದಲ್ಲಿ ಭೂರಿಯಾ ಅವರು ಬುಡಕಟ್ಟು ವ್ಯವಹಾರಗಳ ಸಚಿವರಾಗಿದ್ದರು. ಅವರ ಹೇಳಿಕೆಗೆ ಆಡಳಿತಾರೂಢ ಬಿಜೆಪಿಯಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಾಯಕನ ವಿರುದ್ಧ ಚುನಾವಣಾ ಆಯೋಗದಿಂದ ಕ್ರಮ ಕೈಗೊಳ್ಳುವಂತೆ ಕೋರಿದೆ.