ತುಮಕೂರು: ರೈತರ ಮಕ್ಕಳ ಮದುವೆಯಾಗಲು ವಧುಗಳು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಭರ್ಜರಿ ಘೋಷಣೆ ಮಾಡಿದ್ದಾರೆ. ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದಲ್ಲಿ ಬುಧವಾರ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿದೆ. ಒಂದೊಂದು ಊರಲ್ಲಿ 50 ರಿಂದ 100 ಗಂಡು ಮಕ್ಕಳು ಹುಡುಗಿ ಸಿಗದೇ ಕಾಯುತ್ತಿದ್ದಾರೆ. ಹೆಣ್ಣು ಸಿಗಲಿಲ್ಲ ಎಂದು ನಿರಾಸರಾಗಿದ್ದಾರೆ. ಹೀಗಾಯೇ ಸೂಕ್ತ ತೀರ್ಮಾನ ಕೈಗೊಂಡು ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಎರಡು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದರು.
ರೈತರ ಮಕ್ಕಳಿಂದ ಮಧುಗಳು ದೂರು
ಸಭೆ ಸಮಾರಂಭಗಳಲ್ಲಿ ರೈತರ ಮಕ್ಕಳು ಭೇಟಿಯಾದ ಸಂದರ್ಭದಲ್ಲಿ ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಬಗ್ಗೆ ಮನವಿ ಪತ್ರ ನೀಡಿದ್ದರು. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕೋರಿದ್ದರು. ಆ ನಂತರ ವಿಚಾರಣೆ ನಡೆಸಿದಾಗ ಈ ಸಮಸ್ಯೆ ದೊಡ್ಡ ಮಟ್ಟದಲ್ಲಿದೆ ಎಂದು ತಿಳಿಯಿತು. ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ರೈತರ ಮಕ್ಕಳನ್ನು ಮದುಬೆಯಾಗುವ ಹೆಣ್ಣು ಮಕ್ಕಳಿಗೆ ತಲಾ ಎರಡು ಲಕ್ಷ ರೂಪಾಯಿ ನೀಡುವ ಯೋಜನೆ ಜಾರಿಗೆ ತರಲು ತೀರ್ಮಾನಿಸಲಾಯಿತು ಎಂದರು.