ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕ್ರಮೇಣ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗುತ್ತಾ ಸಾಗಿದ್ದು, ಒಂದೇ ದಿನ ದೇಶಾದ್ಯಂತ 2,151 ಸೋಂಕು ಪ್ರಕರಣ ವರದಿಯಾಗಿದೆ. ಇದು ಕಳೆದ ಐದು ತಿಂಗಳಲ್ಲಿ ದೇಶದಲ್ಲಿ ದಾಖಲಾದ ಗರಿಷ್ಠ ಪ್ರಮಾಣದ ಸೋಂಕಿತರ ಪ್ರಮಾಣವಾಗಿದೆ. ಇಂದು ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಸಕ್ರಿಯ ಪ್ರಕರಣಗಳ ಸಂಖ್ಯೆ 11,903 ಕ್ಕೆ ಏರಿದೆ.
ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ 7 ಮಂದಿ ಸೋಂಕಿತರು ಸಾವನ್ನಪ್ಪಿದ್ದು. ಆ ಮೂಲಕ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 5,30,848 ಕ್ಕೆ ಏರಿದೆ. ಮಹಾರಾಷ್ಟ್ರದಿಂದ ಮೂರು, ಕರ್ನಾಟಕದಿಂದ ಒಂದು ಮತ್ತು ಕೇರಳದಿಂದ ಮೂರು ಸಾವುಗಳು ವರದಿಯಾಗಿವೆ.ಇನ್ನು ದೈನಂದಿನ ಧನಾತ್ಮಕತೆಯ ದರವು 1.51 ಪ್ರತಿಶತ ಮತ್ತು ವಾರದ ಧನಾತ್ಮಕ ದರವನ್ನು 1.53 ಪ್ರತಿಶತದಲ್ಲಿ ದಾಖಲಿಸಲಾಗಿದೆ.ನಿನ್ನೆ ದೇಶಾದ್ಯಂತ 1,573 ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದವು.