ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ(Gundlupet) ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಯಲ್ಲಿ ಜು.18 ರಂದು ಕಲುಷಿತ ಆಹಾರ ಸೇವಿಸಿ ಒಟ್ಟು 24 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿಂದಂತೆ ಯಡವನಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲ್ ಆಗಿರುವ ಕುಮಾರಸ್ವಾಮಿ ಎನ್ನುವವರನ್ನ ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಿಇಒ ಡಾ.ನವೀನ್ಕುಮಾರ್ ಆದೇಶ ಹೊರಡಿಸಿದ್ದಾರೆ. ಇನ್ನು ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳನ್ನು ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತು.