2ಎ ಮೀಸಲಾತಿಗಾಗಿ ಮತ್ತೆ ಶಿವಮೊಗ್ಗ ಜಿಲ್ಲೆಯಿಂದ ಹೋರಾಟ ಆರಂಭ: ಜಯಮೃತ್ಯುಂಜಯ ಸ್ವಾಮೀಜಿ

ಜಿಲ್ಲೆ

ಶಿವಮೊಗ್ಗ: ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಬೇಕೆಂದು ಆಗ್ರಹಿಸಿ, ಶಿವಮೊಗ್ಗ ಜಿಲ್ಲೆಯಿಂದ ಹೋರಾಟ ಆರಂಭಿಸಲಾ ಗುವುದು ಎಂದು ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿಗೆ ಸೇರಿಸಿ ಎಂದು ಜೂನ್ 22 ರಂದು ಸಿಎಂ ಬೊಮ್ಮಾಯಿ ಅವರ ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದಾಗ ಶಾಸಕ ಯತ್ನಾಳ್ ಮತ್ತು ಸಚಿವ ಸಿ.ಸಿ ಪಾಟೀಲ್ ಸಿಎಂ ಎದುರು ಸಂಧಾನ ನಡೆಸಿ ಸಮಯಾವಕಾಶ ಕೇಳಿದ್ದರು.

ಅದರಂತೆ ಆ.22 ರಂದು ಸರ್ಕಾರಕ್ಕೆ ನೀಡಿದ ಗಡುವು ಮುಕ್ತಾಯಗೊಳ್ಳಲಿದೆ, ಅಲ್ಲಿಯವರೆಗೆ ಸುಮ್ಮನೆ ಕೂರೋದು ಬೇಡವೆಂದು ಜ್ಞಾಪಕ ಪತ್ರ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಆ.24ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಿಂದ ವಿನೋಬಾನಗರದಲ್ಲಿರುವ ಬಿ.ಎಸ್.ಯಡಿಯೂರಪ್ಪ ಅವರ ಮನೆಯವರೆಗೆ ಎಚ್ಚರಿಕೆಯ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಅಂದು ಬಿಎಸ್‌ವೈ ಮನೆಗೆ ತೆರಳಿ ಜ್ಞಾಪನಾಪತ್ರ ನೀಡಲಾಗುವುದು. ಒಂದು ವೇಳೆ ಬಿಎಸ್‌ವೈ ಊರಲ್ಲಿ ಇಲ್ಲವೆಂದರೆ ಸಂಸದ ರಾಘವೇಂದ್ರ ಅವರಿಗೆ ನೀಡುತ್ತೇವೆ. ಅವರೂ ಇಲ್ಲವೆಂದರೆ ಜಿಲ್ಲಾಧಿಕಾರಿಗಳಿಗೆ ನೀಡಲಿದ್ದೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

Leave a Reply

Your email address will not be published. Required fields are marked *