ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ದಿನಾಂಕ ಘೋಷಣೆಗೂ ಮುನ್ನವೇ ಜೆಡಿಎಸ್(JDS) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್(Congress) ಮತ್ತು ಬಿಜೆಪಿಗೂ(BJP) ಮುನ್ನವೇ 93 ಹುರಿಯಾಳುಗಳನ್ನ ಕಣಕ್ಕಿಳಿಸಿರುವ ಜೆಡಿಎಸ್ ಇಂದು ಮಧ್ಯಾಹ್ನ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ (JDS Candidate List) ಬಿಡುಗಡೆಯಾಗಲಿದೆ. ಆದ್ರೆ, 2ನೇ ಲಿಸ್ಟ್ನಲ್ಲೂ ಹಾಸನ ಟಿಕೆಟ್ ಅಭ್ಯರ್ಥಿ ಘೋಷಣೆಯಾಗುವುದು ಅನುಮಾನ.
ಇದನ್ನ ಸ್ವತಃ ಹೆಚ್ಡಿ ಕುಮಾರಸ್ವಾಮಿಯೇ(HD Kumaraswamy) ಸ್ಪಷ್ಟಪಡಿಸಿದ್ದಾರೆ. ಹಾಸನ ಟಿಕೆಟ್ ವಿಚಾರದಲ್ಲಿ ಸ್ವಲ್ಪ ಸಮಸ್ಯೆ ಇದೆ. ಯಾರಿಗೆ ಟಿಕೆಟ್ ಎನ್ನುವುದು ಇನ್ನೂ ಬಗೆಹರಿದಿಲ್ಲ ಎಂದು ಕುಮಾರಸ್ವಾಮಿಯೇ ಸ್ಪಷ್ಟಪಡಿಸಿದ್ದಾರೆ. ಪತ್ನಿ ಭವಾನಿಗೇ ಹಾಸನ ಟಿಕೆಟ್ (Hassan Ticket) ಕೊಡಿಸಬೇಕೆಂದು ರೇವಣ್ಣ ಹಠಕ್ಕೆ ಬಿದ್ದಿದ್ರೆ, ಕುಮಾರಸ್ವಾಮಿ ಮಾತ್ರ ಸ್ವರೂಪ್ ಪರವೇ ಬ್ಯಾಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನ ಟಿಕೆಟ್ ಫೈನಲ್ ಮಾಡಲಾಗುತ್ತಿಲ್ಲ. ಅಂತಿಮವಾಗಿ ಅಣ್ತಮಾಸ್ ಮುಸುಕಿನ ಗುದ್ದಾಟದ ಮಧ್ಯೆ ಹೆಚ್ಡಿ ದೇವೇಗೌಡ (HD Devegowda) ಪ್ರವೇಶ ಮಾಡಿದ್ದಾರೆ.