ನವದೆಹಲಿ: ದೆಹಲಿಯಲ್ಲಿ ನಿನ್ನೆ ಸಂಜೆ ಭೂಕಂಪನದ (Earthquake) ಅನುಭವವಾಗಿದೆ. ಸಂಜೆ 4:08ಕ್ಕೆ ಭೂಕಂಪನದ ಅನುಭವವಾಗಿದೆ. ಈ ವೇಳೆ ಜನ ಭಯದಿಂದ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.
ಭೂಕಂಪದ ಪ್ರಮಾಣ ಮತ್ತು ಪರಿಣಾಮದ ಬಗ್ಗೆ ಪರಿಶೀಲಿಸಲಾಗಿದೆ. ಹರಿಯಾಣದ (Haryana) ಫರಿದಾಬಾದ್ ಬಳಿ 10 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.1 ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.