Share ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಮರಿಯಪ್ಪ ( 70 ) ಮುನಿಯಮ್ಮ ( 60 ) ಮತ್ತು ಭಾರತಿ ( 40 ) ಮೃತ ದುರ್ದೈವಿಗಳು. ಊಟ ಮಾಡಿ ಕೈ ತೊಳೆಯಲು ಹೋದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬುದ್ದಿಮಾಂದ್ಯಳಾಗಿದ್ದ ಮಗಳು ಭಾರತಿ ಕೈ ತೊಳೆಯಲು ಹೋಗಿ ನೀರಿಗೆ ಬಿದ್ದಿದ್ದಾಳೆ. ಬಳಿಕ ಮಗಳ ರಕ್ಷಣೆ ಮಾಡಲು ಹೋಗಿ ಮುನಿಯಮ್ಮ ಮತ್ತು ಮರಿಯಪ್ಪ ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಇನ್ನು ಈ ಬಗ್ಗೆ ಹೊಸಕೋಟೆ ಪೊಲೀಸರು ತನಿಖೆ ನಡೆಸಿದ್ದಾರೆ. Share