ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು,(Odisha Train Accident) ಮೃತಪಟ್ಟವರ ಸಂಖ್ಯೆ 280ಕ್ಕೆ ಏರಿಕೆಯಾಗಿದೆ. ಈಗಾಗಲೇ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಒಡಿಶಾದಲ್ಲಿ ಏಕಕಾಲಕ್ಕೆ ಒಂದಲ್ಲ, ಎರಡಲ್ಲ, ಮೂರು ರೈಲುಗಳ ಮಧ್ಯೆ ಅಪಘಾತ ಸಂಭವಿಸಿದೆ. ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಏಕಕಾಲಕ್ಕೆ ಎರಡು ಪ್ಯಾಸೆಂಜರ್ ಹಾಗೂ ಒಂದು ಗೂಡ್ಸ್ ರೈಲುಗಳ ಮಧ್ಯೆ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ. ಮೊದಲು ಕೋರಮಂಡಲ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದೆ. ಹಳಿತಪ್ಪಿದ ಬೋಗಿಗಳು ಪಕ್ಕದ ಹಳಿಗಳ ಮೇಲೆ ಬಿದ್ದಿದೆ. ಆಗ, ಮತ್ತೊಂದು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲು ಡಿಕ್ಕಿಯಾಗಿವೆ.
ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ನೋವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವರೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಲಾಗಿದೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.