ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಡಿ ಗ್ಯಾಂಗ್ ವಿರುದ್ಧ 3,991 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.
ಕಾಮಾಕ್ಷಿಪಾಳ್ಯ ಇನ್ಸ್ಪೆಕ್ಟರ್, ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಕೋರ್ಟ್ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ವ್ಯಕ್ತಿಗಳನ್ನು ದಸ್ತಗಿರಿ ಮಾಡಿ, ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇಲ್ಲಿಯವರೆಗಿನ ತನಿಖೆಯಲ್ಲಿನ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಧರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳ ಕುರಿತ ದೋಷಾರೋಪಣಾ ಪಟ್ಟಿಯನ್ನು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.