ನವದೆಹಲಿ: ಭಾರತವನ್ನು ಜಾಗತಿಕ ಆಟೋಮೊಬೈಲ್ ತಯಾರಿಕಾ ಹಬ್ ಮಾಡಲು ಕೇಂದ್ರ ಸರ್ಕಾರ ಶ್ರಮವಹಿಸುತ್ತಿದೆ ಎಂದು ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಸ್ಥಾಪಿಸಲಾಗಿರುವ ಟಾಟಾ ಮೋಟರ್ಸ್‌ನ ವಾಹನಗಳ ಗುಜರಿ ಘಟಕಕ್ಕೆ ಆನ್‌ಲೈನ್ ಮೂಲಕ ಚಾಲನೆ ನೀಡಿದ ಅವರು, ‘ಸದ್ಯ ಭಾರತದ ಜಿಡಿಪಿಗೆ ಆಟೋಮೊಬೈಲ್ ಉದ್ಯಮದಿಂದ ಶೇ 7.1 ರಷ್ಟು ಕೊಡುಗೆ ನೀಡಲಾಗುತ್ತಿದೆ. ಈ ಕ್ಷೇತ್ರದ ಗಾತ್ರ 7.8 ಲಕ್ಷ ಕೋಟಿ ರೂನಷ್ಟಿದ್ದು, ಅದನ್ನು ಮುಂಬರುವ ವರ್ಷಗಳಲ್ಲಿ 15 ಲಕ್ಷ ಕೋಟಿ ರೂಗೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದರು.
ಪ್ರಸ್ತುತ ಆಟೋಮೊಬೈಲ್ ಕ್ಷೇತ್ರವು ಸುಮಾರು 7.8 ಲಕ್ಷ ಕೋಟಿ ಮೌಲ್ಯದ್ದಾಗಿದೆ ಮತ್ತು GDP ಗೆ 7.1 ರಷ್ಟು ಕೊಡುಗೆ ನೀಡುತ್ತದೆ. ಆಟೋಮೊಬೈಲ್ ಕ್ಷೇತ್ರದಿಂದ ದೇಶದಾದ್ಯಂತ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ 4 ಕೋಟಿ ಉದ್ಯೋಗಗಳು ಸಿಕ್ಕಿವೆ. ಇದನ್ನು 2025ರ ವೇಳೆಗೆ 5 ಕೋಟಿಗೆ ಹೆಚ್ಚಿಸುವ ಸಂಕಲ್ಪ ಕೈಗೊಳ್ಳಲಾಗಿದೆ. ಈ ಮೂಲಕ ಜಗತ್ತಿನಲ್ಲಿ ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರತವನ್ನು ನಂಬರ್ 1 ಆಗಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.