ಅಸ್ಸಾಂ: ತಿಥಿ ಕಾರ್ಯವೊಂದರ ಊಟ ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 40 ಜನರು ಅಸ್ವಸ್ಥರಾಗಿದ್ದಾರೆ. ಈ ಘಟನೆ ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ನಡೆದಿದೆ.
ಗೋಲ್ಪಾರಾ ಜಿಲ್ಲೆಯ ಮರಿಯಂಪುರ ಪ್ರದೇಶದಲ್ಲಿ ನಡೆದ ಮರಣಾನಂತರದ ಧಾರ್ಮಿಕ ( ತಿಥಿ ಕಾರ್ಯ) ಕಾರ್ಯಕ್ರಮವೊಂದರಲ್ಲಿ ಆಹಾರ ಪದಾರ್ಥಗಳನ್ನು ಸೇವಿಸಿದ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 40 ಜನರು ಅಸ್ವಸ್ಥರಾಗಿದ್ದಾರೆ.
ತಕ್ಷಣವೇ ರಂಗಜುಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
‘ತಿಥಿ ಕಾರ್ಯಕ್ರಮಕ್ಕೆ ಬಂದಿದ್ದವರು ಇತರ ಆಹಾರದ ಜೊತೆಗೆ ಮೀನುಗಳನ್ನು ಸೇವಿಸಿದ್ದಾರೆ’ ಎಂದು ಕುಟುಂಬ ಸದಸ್ಯರು ತಿಳಿಸಿದರು. ನಿಜವಾದ ಕಾರಣ ಇನ್ನೂ ಪತ್ತೆಯಾಗಿಲ್ಲ, ಆದಾಗ್ಯೂ, ಇದು ಆಹಾರ ವಿಷಕಾರಿ ಪ್ರಕರಣ ಎಂದು ತೋರುತ್ತದೆ. ಈವರೆಗೆ 20-25 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇನ್ನೂ ಹಲವು ಅಸ್ವಸ್ಥರು ಬರುತ್ತಿದ್ದಾರೆ. ಈಗ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಂಗಜುಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ತಿಳಿಸಿದ್ದಾರೆ.