ನವದೆಹಲಿ: ಮಹತ್ವದ ಕಾರ್ಯಾಚರಣೆಯಲ್ಲಿ ಛತ್ತರ್ಪುರದಲ್ಲಿ ನಿರ್ಮಿಸಿದ್ದ ಮದ್ಯದ ಉದ್ಯಮಿ ದಿವಂಗತ ಪಾಂಟಿ ಚಡ್ಡಾ ಅವರ 400 ಕೋಟಿ ರೂ. ಮೌಲ್ಯದ ಫಾರ್ಮ್ಹೌಸ್ ಅನ್ನು ನೆಲಸಮಗೊಳಿಸಲಾಗಿದೆ ಎಂದು ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ನಗರದಲ್ಲಿ ಅನಧಿಕೃತ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಅಕ್ರಮ ಕಟ್ಟಡಗಳ ನಿರ್ಮಾಣ ತೆರವು ಕಾರ್ಯಾಚರಣೆ ಆರಂಭಿಸಿರುವ ಡಿಡಿಎ ಭಾರೀ ಪ್ರಮಾಣದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಸುಮಾರು 10 ಎಕರೆಯಷ್ಟು ವಿಸ್ತೀರ್ಣದಲ್ಲಿ ನಿರ್ಮಿಸಿದ್ದ ಮದ್ಯದ ಉದ್ಯಮಿ ದಿವಂಗತ ಪಾಂಟಿ ಚಡ್ಡಾ ಅಲಿಯಾಸ್ ಗುರುದೀಪ್ ಸಿಂಗ್ ಅವರ ಫಾರ್ಮ್ಹೌಸ್ ಅನ್ನು ನೆಲಸಮಗೊಳಿಸಿದೆ. ಈ ಫಾರ್ಮ್ಹೌಸ್ ಸುಮಾರು 400 ಕೋಟಿ ರೂ. ಮೌಲ್ಯದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸತತ ಎರಡು ದಿನಗಳ ಕಾರ್ಯಾಚರಣೆ ಬಳಿಕ 10 ಎಕರೆ ಭೂಪ್ರದೇಶವನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ ತನ್ನ ವಶಕ್ಕೆ ತೆಗೆದುಕೊಂಡಿದೆ. ದಿವಂಗತ ಪಾಂಟಿ ಚಡ್ಡಾ ಅಲಿಯಾಸ್ ಗುರುದೀಪ್ ಸಿಂಗ್ ಅವರ ಸಂಸ್ಥೆ ಅಥವಾ ಕುಟುಂಬಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಅಲ್ಲದೇ ಕಳೆದ ಜನವರಿ 13 ಮತ್ತು 17ರಂದು ಈಶಾನ್ಯ ದೆಹಲಿಯ ಗೋಕುಲಪುರಿಯಲ್ಲಿ ನಡೆಸಲಾದ ಒತ್ತುವರಿ ಕಾರ್ಯಾಚರಣೆಯಲ್ಲಿ ಹಲವು ವಾಣಿಜ್ಯ ಶೋ ರೂಮ್ಗಳನ್ನು ನೆಲಸಮಗೊಳಿಸಿ 4 ಎಕರೆ ಭೂಪ್ರದೇಶವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು.