ಬೆಂಗಳೂರು:- ಬೆಂಗಳೂರು ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಐವರಿಗೆ ಹೆಚ್ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.
ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಉತ್ತಮವಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ
ಹೆಚ್ಚು ತಾಪಮಾನ ನಡುವೆ ಬೆಂಗಳೂರಿನಲ್ಲಿ ಕಾಲರಾ ಭೀತಿ ಶುರುವಾಗಿದೆ. ಇದರ ಮಧ್ಯೆ ಏಕಾಏಕಿ ಬೆಂಗಳೂರು ಮೆಡಿಕಲ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿನಿಯರು ಏಕಾಏಕಿ ವಾಂತಿ-ಭೇದಿಯಿಂದಾಗಿ ಅಸ್ವಸ್ಥಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲರಾ ಶಂಕೆ ವ್ಯಕ್ತವಾಗಿದೆ. ಇದರಿಂದ ಆರೋಗ್ಯ ಇಲಾಖೆಗೆ ಟೆನ್ಷನ್ ಶುರುವಾಗಿದೆ.