ಬೆಂಗಳೂರು: ಇದೇ ಜುಲೈ 15ರಿಂದ ಜು.26ರ ವರೆಗೆ 16ನೇ ವಿಧಾನಸಭೆಯ 4ನೇ ಅಧಿವೇಶನ (Karnataka Assembly Session) ನಡೆಯಲಿದೆ. ಒಟ್ಟು 9 ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನ ಪರ್ಯಾಯಾಲೋಚನೆಗೆ ಒಳಪಡಿಸುವುದು ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳುವುದಾಗಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ (UT Khader) ತಿಳಿಸಿದ್ದಾರೆ
, 9 ದಿನಗಳ ಕಾಲ ಪ್ರಶ್ನೋತ್ತರ ಕಲಾಪ ನಿಗದಿಪಡಿಸಲಾಗಿದೆ. ಇದರೊಂದಿಗೆ ಗಮನ ಸೆಳೆಯುವ ಸೂಚನೆ, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರ ಕಾರ್ಯಕಲಾಪಗಳನ್ನ ನಡೆಸಲಾಗುವುದು. ಅಲ್ಲದೇ 2024-24ನೇ ಸಾಲಿನ ವಿಧಾನ ಮಂಡಲ ಅಥವಾ ವಿಧಾನಸಭೆಯ ಸ್ಥಾಯಿ ಸಮಿತಿಗಳ ಅವಧಿ ಆಗಸ್ಟ್ 8ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ 2024-25ನೇ ಸಾಲಿಗೆ ಹೊಸದಾಗಿ ಸಮಿತಿಗಳನ್ನ ರಚಿಸುವ ಸಂಬಂಧ ಚುನಾವಣಾ ಪ್ರಸ್ತಾವವನ್ನ ಮಂಡಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪೀಕರ್ ಮಾಹಿತಿ ನೀಡಿದ್ದಾರೆ