ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಬನ್ನೇರುಘಟ್ಟ ಮುಖ್ಯ ರಸ್ತೆಯ ಕೊಪ್ಪ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5.20 ಲಕ್ಷ ರೂ. ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ನಿನ್ನೆ ಚುನಾವಣೆ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಮಧು ಎಂಬವರು ಬ್ಯಾಂಕ್ನಿಂದ ಡ್ರಾ ಮಾಡಿ ಹಣ ತೆಗೆದುಕೊಂಡು ಹೋಗುತ್ತಿದ್ದರು.
ಅತ್ತಿಬೆಲೆಯ ಜೆ.ಕೆ ಇಂಡಸ್ಟ್ರೀಸ್ಗೆ ತೆಗೆದುಕೊಂಡು ಹೋಗುತ್ತಿದ್ದ ಹಣ ಎನ್ನಲಾಗಿದೆ. ಚುನಾವಣೆ ಚೆಕ್ಪೋಸ್ಟ್ನಲ್ಲಿ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ನಲ್ಲಿ ಹಣ ಇತ್ತು. ಹಣಕ್ಕೆ ಸೂಕ್ತ ದಾಖಲೆ ನೀಡಿದ ಹಿನ್ನೆಲೆ ವಶಕ್ಕೆ ಪಡೆಯಲಾಗಿದೆ. ಜಿಗಣಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಹಣವನ್ನು ಸೀಜ್ ಮಾಡಿದ್ದಾರೆ.