ನವದೆಹಲಿ: ರಾಜ್ಯದ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ (Board Exam Results) ಪ್ರಕಟಿಸದಂತೆ ಸುಪ್ರೀಂಕೋರ್ಟ್ (Supreme Court of India) ತಡೆ ನೀಡಿದೆ. 5,8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಗೆ ಅನುಮತಿ ನೀಡಿದ್ದ ಹೈಕೋರ್ಟ್ (High Court of Karnataka) ಆದೇಶವನ್ನು ಪ್ರಶ್ನಿಸಿ, ರುಪ್ಸಾ, ಅವರ್ ಸ್ಕೂಲ್, ಆರ್ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘಟನೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು.
ಇದೀಗ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪರೀಕ್ಷಾ ಫಲಿತಾಂಶ ಪ್ರಕಟಿಸಿದಂತೆ ತಡೆ ನೀಡಿದೆ. ಅಲ್ಲದೇ ರಾಜ್ಯ ಸರ್ಕಾರಕ್ಕೆ ನೋಟಿಸ್ ಕೂಡ ಜಾರಿಗೊಳಿಸಿದೆ. ಈಗಾಗಲೇ 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶವನ್ನು ಬೆಳಗ್ಗೆ 10 ಗಂಟೆಗೆ ಶಾಲೆಗಳು ಪ್ರಕಟ ಮಾಡಿವೆ. ಎಲ್ಲಾ ಶಾಲೆಗಳಲ್ಲಿ ಆಡಳಿತ ಮಂಡಳಿಗಳು ಫಲಿತಾಂಶ ಪ್ರಕಟ ಮಾಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಫಲಿತಾಂಶ ರವಾನೆ ಮಾಡಲಾಗಿದೆ. ಆಡಳಿತ ಮಂಡಳಿಗಳು ಶಿಕ್ಷಣ ಇಲಾಖೆಗೆ ಮಾಹಿತಿ ಅಪ್ಲೋಡ್ ಮಾಡಬೇಕಿದೆ.