ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 5,874 ಹೊಸ ಪ್ರಕರಣಗಳು ಪತ್ತೆಯಾಗಿದ್ದು(New cases detected), 25 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ (A case of covid in the country) ಒಟ್ಟು ಸಂಖ್ಯೆ 4,49,45,389ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,533ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ (Number of active cases)49,015ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,43,64,841ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 1,77,281 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,66,73,860 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ (Covishield and Covaccine) ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಜನರಿಗೆ 220,66,66,261 ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.