ಬೆಂಗಳೂರು: ಪುನೀತ್ ರಾಜಕುಮಾರ್ ಸ್ಮರಣಾರ್ಥ ಆರೋಗ್ಯ ವ್ಯವಸ್ಥೆ ಕಲ್ಪಿಸಲು ಸರ್ಕಾರ 6 ಕೋಟಿ ರೂಪಾಯಿ ಮೀಸಲಿಟ್ಟಿದೆ. ಹಠಾತ್ ಹೃದಯಾಘಾತ ತಪ್ಪಿಸಲು ಆಸ್ಪತ್ರೆಗಳಲ್ಲಿ ಎಇಡಿ ವ್ಯವಸ್ಥೆ ಮಾಡಲಾಗಿದೆ.
ಪುನೀತ್ ಅವರಿಗೆ ಹಠಾತ್ ಹೃದಯಬೇನೆ ಕಾಣಿಸಿಕೊಂಡಾಗ ಯಾವ ರೀತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಬೇಕಿತ್ತು ಎಂದೆಲ್ಲ ಚರ್ಚೆ ಆಯಿತು. ಅದೆಲ್ಲವನ್ನೂ ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಬಜೆಟ್ (Karnataka Budget 2023)ನಲ್ಲಿ ಪುನೀತ್ ಹೆಸರಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒಂದಷ್ಟು ಅನುದಾನ ನೀಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.