ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಜನರನ್ನು ಬಂಧಿಸಲಾಗಿದೆ. ದರ್ಶನ್ ಅವರನ್ನು 14ನೇ ತಾರೀಖಿನ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈ ಮಧ್ಯೆ ಪೊಲೀಸರು ಹೊಸ ಹೊಸ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ. ವಿಚಾರಣೆ ವೇಳೆ ಪೊಲೀಸರಿಗೆ ಮತ್ತೊಂದು ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ.
ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾ ಸ್ವಾಮಿ ಹತ್ಯೆ ನಡೆಯಿತು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂತು. ಕೊಲೆಗೂ ಮುನ್ನ ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ನೀಡಲಾಗಿತ್ತು ಎಂಬ ಆರೋಪ ಇದೆ. ಹಲ್ಲೆ ವೇಳೆ ಪ್ರಜ್ಞೆ ತಪ್ಪಿದ್ದ ರೇಣುಕಾ ಸ್ವಾಮಿಗೆ ಮೆಗ್ಗರ್ನಿಂದ ಎಲೆಕ್ಟ್ರಿಕ್ ಶಾಕ್ ನೀಡಲಾಗಿತ್ತು ಎಂಬುದು ವಿಚಾರಣೆ ವೇಳೆ ಬಯಲಿಗೆ ಬಂದಿದೆ.
ಡಿ ಗ್ಯಾಂಗ್ ಸದಸ್ಯರಿಗೆ ಮೆಗ್ಗರ್ ಸಿಕ್ಕಿದ್ದು ಎಂಬುದು ಇದೀಗ ಬಯಲಾಗಿದೆ. ಆನ್ಲೈನ್ ಮೂಲಕ ಕಿಡಿಗೇಡಿಗಳು ಈ ಸಾಧನವನ್ನು ತರಿಸಿದ್ದರು. ಕೇವಲ 699 ರೂಪಾಯಿಗೆ ಅಮೇಜಾನ್ ಶಾಪಿಂಗ್ನಲ್ಲಿ ಲಭ್ಯವಾಗಿದ್ದ ಈ ವಸ್ತುವನ್ನು ಧನರಾಜ್ ಎಂಬಾತ ತರಿಸಿಕೊಂಡಿದ್ದ. ಡೆಲಿವರಿ ಪಡೆದ ಬಳಿಕ ಸ್ಕ್ಯಾನ್ ಮಾಡಿ ಹಣ ಪಾವತಿಸಿದ್ದ. ಹಾಗಾಗಿ ಸದ್ಯ ಡೆಲಿವರಿ ಬಾಯ್ನನ್ನು ಕೂಡ ಪೊಲೀಸರು ಸಾಕ್ಷಿಯಾಗಿ ಪರಿಗಣಿಸಿದ್ದಾರೆ.
ತನಿಖೆ ಮುಂದುವರಿದಂತೆಲ್ಲ ರೇಣುಕಾ ಸ್ವಾಮಿ ಮರ್ಡರ್ ಕೇಸ್ನ ಶಾಕಿಂಗ್ ವಿಚಾರಗಳು ಹೊರಬರುತ್ತಿವೆ. ನ್ಯಾಯಾಂಗ ಬಂಧನದಲ್ಲಿ ಇರುವ ದರ್ಶನ್ ಹಾಗೂ ಸಹಚರರು ಆಗಸ್ಟ್ 14ರವರೆಗೂ ನ್ಯಾಯಾಂಗ ಬಂಧನ ಮುಂದೂಡಲಾಗಿದೆ.