ಗದಗ ಜಿಲ್ಲೆಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ತೆರೆದ ವಾಹನದಲ್ಲಿ ಗೌರವ ವಂದನೆ ಸ್ವೀಕಾರ ಮಾಡಿ ಗದಗನ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಎಚ್ ಕೆ ಪಾಟೀಲ್ ರಿಂದ ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು. ಪೊಲೀಸ್, ಹೋಮ್ ಗಾರ್ಡ,
ಎನ್ ಸಿ ಸಿ, ಅಗ್ನಿಶಾಮಕ ದಳ, ಮಾಜಿ ಸೈನಿಕರಿಂದ ಆಕರ್ಷಕ ಕವಾಯತು ಮಾಡಲಾಯಿತು.
ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಎಸ್ಪಿ ಬಿ ಎಸ್ ನೇಮಗೌಡ, ಸಾವಿರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.