ಬೆಂಗಳೂರು: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ಇದರ ಭಾಗವಾಗಿ ಇತ್ತ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ.
ಧ್ವಜಾರೋಹಣದ ಬಳಿಕ ಮಾತನಾಡಿನ ಸಿಎಂ ಸಿದ್ದರಾಮಯ್ಯ ಅವರು, ನಾಡಿನ ಜನತೆಗೆ 78 ನೇ ಸ್ವಾತಂತ್ರ್ಯೋತ್ಸವದ ಶುಭಾಷಯಗಳನ್ನು ಕೋರಿದ್ದಾರೆ.ಸ್ವಾತಂತ್ರ್ಯದ ಅರಿವು ಮತ್ತು ದೇಶದ ಮೇಲಿನ ಅಭಿಮಾನದ ಕಿಚ್ಚನ್ನು ಹೊತ್ತಿಸಿದ್ದು ರಾಷ್ಟ್ರೀಯ ಚಳುವಳಿ. ಅದರ ನೇತೃತ್ವವನ್ನು ಹೊತ್ತಿದ್ದು ಮಹಾತ್ಮ ಗಾಂಧೀಜಿಯವರ ಮುಂದಾಳತ್ವದ ರಾಷ್ಟ್ರೀಯ ಕಾಂಗ್ರೆಸ್. ಈ ರಾಷ್ಟ್ರೀಯ ಚಳುವಳಿಯ ಭದ್ರ ಬುನಾದಿ ಮೇಲೆ ರೂಪುಗೊಂಡಿದ್ದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ್ದ ಭಾರತದ ಸಂವಿಧಾನ ಮತ್ತು ಅದನ್ನು ಆಧರಿಸಿದ ಪ್ರಜಾಪ್ರಭುತ್ವ.
ಹಾಗೆ 78ನೇ ಸ್ವಾತಂತ್ರೋತ್ಸವದಲ್ಲಿ ಸಿದ್ದರಾಮಯ್ಯ ʻಗ್ಯಾರಂಟಿʼ ಮಾತುಗಳಾನ್ನಾಡಿದ್ದು, ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಜನರ ಜೀವನ ಮಟ್ಟ ಸುದಾರಿಸುವಂತೆ ಮಾಡಿದೆ ಗೃಹಲಕ್ಷ್ಮಿ ಯೋಜನೆಯಡಿ 1.20 ಕೋಟಿ ಮಹಿಳೆಯರಿಗೆ ಅನುಕೂಲ , ೀವರೆಗೆ 25,258 ಕೊಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಈವರೆಗೆ 4.08 ಕೋಟಿ ಅನ್ನಭಾಗ್ಯ ಫಲಾನುಭವಿಗಳಿಗೆ ಪ್ರಯೋಜನೆ ಪಡೆದಿದ್ದಾರೆ. ಗೃಹಜ್ಯೋತಿ ಯೋಜನೆಗೆ 8,844 ಕೋಟಿ ರೂ. ನೀಡಲಾಗಿದೆ. ಯುವನಿಧಿ ಯೋಜನೆಗೆ 1.31 ಲಕ್ಷ ಪದವೀಧರ, ಡಿಪ್ಲೋಮಾ ನಿರುದ್ಯೋಗಿಗಳಿಗೆ ಸಹಾಯಧನ ನೀಡಲಾಗಿದೆ. ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ