ಹುಬ್ಬಳ್ಳಿ: ದೇಶದಲ್ಲಿನ ಜನರಿಗೆ ಗುಣಮಟ್ಟದ ಆಹಾರ ಧಾನ್ಯಗಳನ್ನು ಕೈಗೆಟುಕುವ ದರದಲ್ಲಿ ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಭಾರತ ಉತ್ಪನ್ನಗಳ ಬಿಡುಗಡೆ ಹಂತದ ಎರಡನೇ ಅಭಿಯಾನಕ್ಕೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಆವರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಕೇಂದ್ರ ಸರ್ಕಾರದಿಂದ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರಿಗೆ ಬೆಲೆ ಏರಿಕೆಯ ಬಿಸಿಯನ್ನು ತಡೆಯಲು ಭಾರತ ಉತ್ಪನ್ನಗಳಾದ ಅಕ್ಕಿ, ಗೋಧಿ ಹಿಟ್ಟು, ಕಡಲೆ ಬೇಳೆ, ಹೆಸರು ಬೇಳೆಯನ್ನು ಅತ್ಯಂತ ರಿಯಾಯಿತಿ ದರದಲ್ಲಿ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು, ಸಾರ್ವಜನಿಕರಿಗೆ ಧಾನ್ಯಗಳ ವಿತರಣೆ ಜೊತೆಗೆ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಸುಮಾರು 50ವಾಹನಗಳು ಅವಳಿನಗರದಲ್ಲಿ ಸಂಚರಿಸುವ ಮೂಲಕ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತದೆ. ಈ ಬಗ್ಗೆ ಕೇಂದ್ರ ಸಚಿವರು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.
ಇನ್ನೂ ಜನರಿಗೆ ಬೆಲೆ ಏರಿಕೆಯ ಬಿಸಿ ನಿಜಕ್ಕೂ ಇತ್ತಿಚಿನ ದಿನಗಳಲ್ಲಿ ಬಹುದೊಡ್ಡ ಸಮಸ್ಯೆಯಾಗಿದ್ದು, ಇಂತಹದೊಂದು ಕಾರ್ಯಕ್ರಮದ ಮೂಲಕ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ನೇತೃತ್ವದಲ್ಲಿ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಜನರಿಗೆ ಅಗತ್ಯ ಆಹಾರ ವಸ್ತುಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ದರದಲ್ಲಿ ವಿತರಣೆ ಮಾಡುತ್ತಿರುವುದು ನಿಜಕ್ಕೂ ವಿಶೇಷವಾಗಿದ್ದು, ಪ್ರಹ್ಲಾದ ಜೋಶಿಯವರ ನೇತೃತ್ವದ ಕಾರ್ಯಕ್ಕೆ ಎಲ್ಲೆಡೆಯೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.