ಬೀದರ್: ಬೀದರ್ನಲ್ಲಿ ಎರಡು ಕಡೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಪೋಲಿಸರು ಶಾಕ್ ಕೊಟ್ಟಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ಇದಕ್ಕೂ ಮೊದಲು ಬೀದರ್ ಡಿಸಿ ಕಚೇರಿಯಲ್ಲಿ ಶಿರಸ್ತೇದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕೆಲವು ತಿಂಗಳ ಹಿಂದೆ ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಅದಿಕಾರ ಸ್ವೀಕರಿಸಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ರವೀಂದ್ರಕುಮಾರ ರೊಟ್ಟಿ ಮನೆ ಮೇಲೆ ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ.