ರಾಮನಗರ: ಈ ಉಪಚುನಾವಣೆ ರಾಜ್ಯದ ಇತಿಹಾಸದ ಪುಟದಲ್ಲಿ ಉಳಿಯುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಉಪಚುನಾವಣೆ ರಾಜ್ಯದ ಇತಿಹಾಸದ ಪುಟದಲ್ಲಿ ಉಳಿಯುತ್ತೆ. ಈ ಉಪಚುನಾವಣೆ ನಿಖಿಲ್ ಕುಮಾರಸ್ವಾಮಿ ಉಪಚುನಾವಣೆ ಆಗಿರಲಿಲ್ಲ.
ಎರಡೂ ಪಕ್ಷದ ಕಾರ್ಯಕರ್ತರ ಚುನಾವಣೆ ಆಗಿತ್ತು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಜಿ ಅವರು ಸ್ಪಷ್ಟ ಸಂದೇಶ ಕೊಟ್ಟಿದ್ದರು. ಯುವಕನ ಪರವಾಗಿ ನಡ್ಡಾರವರು ಮಾತನಾಡಿದ್ದಕ್ಕೆ ಧನ್ಯವಾದ ತಿಳಿಸುತ್ತೇನೆ. ಎರಡೂ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಚುನಾವಣೆ ಮಾಡಿದ್ದಾರೆ ” ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಕಳೆದ 18 ದಿನಗಳ ಹಿಂದೆ ಎನ್ ಡಿ ಎ ಅಭ್ಯರ್ಥಿ ಯಾರು ಆಗಬೇಕು ಎಂಬ ಪ್ರಶ್ನೆ ಉದ್ಭವ ಆಯ್ತು. ಆಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಕರೆದು ನನ್ನ ಹೆಸರು ಘೋಷಣೆ ಮಾಡಿದರು. ಕಳೆದ ಎರಡು ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ ಎಂದು ನಿಖಿಲ್ ತಿಳಿಸಿದರು.