ಹುಬ್ಬಳ್ಳಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಮಹಿಳಾ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದರು. ಇಂದು ಸರ್ಕ್ಯೂಟ್ ಹೌಸ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರು ಹೆಚ್ಚಾಗಿ ಸಂಚಾರ ಮಾಡುತ್ತಿದ್ದಾರೆ.
ಶಕ್ತಿ ಯೋಜನೆಗಾಗಿ ಬಜೆಟ್ನಲ್ಲಿ ರೂ. 5,500 ಕೋಟಿ ಹಣವನ್ನು ಮೀಸಲಿಡಲಾಗಿದೆ.
ಶಕ್ತಿ ಯೋಜನೆಯಡಿ ಓಡಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಕೆಎಸ್ಆರ್ಟಿಸಿ ಮೊದಲು ಒಂದು ಸಂಸ್ಥೆಯಾಗಿತ್ತು. ನಂತರ ಬಿಎಂಟಿಸಿ, ಕಲ್ಯಾಣ ಕರ್ನಾಟಕ, ವಾಯವ್ಯ ಕರ್ನಾಟಕ ಮತ್ತು ಕೆಎಸ್ಆರ್ಟಿಸಿ ಎಂಬ 4 ಸಂಸ್ಥೆಗಳಾಗಿ ಇಬ್ಭಾಗವಾಯಿತು. 4 ಸಂಸ್ಥೆಗಳು ಸೇರಿ ಒಟ್ಟು 26 ಸಾವಿರಕ್ಕೂ ಅಧಿಕ ಬಸ್ಗಳಿವೆ. 1.04 ಲಕ್ಷ ನೌಕರರಿದ್ದು, 10 ಸಾವಿರ ಜನರು ಹೊಸದಾಗಿ ಸೇರ್ಪಡೆಯಾಗಲಿದ್ದಾರೆ. ದೇಶದಲ್ಲಿಯೇ ಅತಿಹೆಚ್ಚು ಬಸ್ಗಳನ್ನು ಹೊಂದಿದ ಸಂಸ್ಥೆಗಳು ನಮ್ಮದಾಗಿವೆ. ಮಹಾರಾಷ್ಟç ರಾಜ್ಯ 2ನೇ ಸ್ಥಾನದಲ್ಲಿದೆ. 6,500 ಬಸ್ಗಳಿಗೆ ಆದೇಶ ಕೊಡಲಾಗಿತ್ತು. ಅದರಲ್ಲಿ 5,400 ಬಸ್ಗಳು ಈಗಾಗಲೇ ಸಂಸ್ಥೆಗಳಿಗೆ ಒದಗಿಸಲಾಗಿದೆ. ಉಳಿದ ಬಸ್ಗಳು 2-3 ತಿಂಗಳಲ್ಲಿ ಸೇರ್ಪಡೆಯಾಗಲಿವೆ. ಬೆಂಗಳೂರಿನಲ್ಲಿ ಎಲೆಕ್ಟಿçಕ್ ಬಸ್ಗಳಿಗೆ ಟೆಂಡರ್ ಕರೆಯಲಾಗಿತ್ತು. ಉಳಿದವುಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರದಲ್ಲಿಯೇ ಬಸ್ಗಳು ಬರಲಿವೆ ಎಂದರು.
2016ರಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ನೇಮಕಾತಿ ಮಾಡಲಾಗಿತ್ತು. ಸುಮಾರು 14 ಸಾವಿರ ಜನರು ನಿವೃತ್ತರಾಗಿದ್ದಾರೆ. 9 ಸಾವಿರ ಜನರ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದ್ದು, ಈಗಾಗಲೇ 2 ಸಾವಿರ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ 2 ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಕ್ತಾಯವಾಗಲಿದೆ. ಅನುಕಂಪ ಆಧಾರದ ಮೇಲೆ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಅಪಘಾತ ಹಾಗೂ ಅಪರಾಧ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡಲಾಗುತ್ತದೆ. ಸಾರಿಗೆ ಸಂಜೀವಿನಿ ಯೋಜನೆ ಮೂಲಕ ನೌಕರರು ಹಾಗೂ ಅವರ ಕುಟುಂಬಸ್ಥರಿಗೆ ನಗದು ರಹಿತ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಮೃತಪಟ್ಟ ನೌಕರರಿಗೆ ಅಪಘಾತ ವಿಮೆ ಯೋಜನೆ ಮೂಲಕ ರೂ.50 ಲಕ್ಷ ಮೊತ್ತ ಒದಗಿಸಲಾಗುವುದು.
ಮುಂದಿನ ದಿನಗಳಲ್ಲಿ ರೂ.1 ಕೋಟಿ ಮೊತ್ತಕ್ಕೆ ಹೆಚ್ಚಿಸಲಾಗುವುದು. ಇಂದು 211 ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿದ್ದು, ನೇಮಕಾತಿ ಪತ್ರಗಳನ್ನು ವಿತರಿಸಲಾಗುತ್ತಿದೆ. ಅಲ್ಲದೇ ರೂ. 60 ಕೋಟಿ ವೆಚ್ಚದ 127 ನೂತನ ಬಸ್ಗಳಿಗೆ ಚಾಲನೆ ನೀಡಲಾಗುತ್ತಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಬ್ಬಯ್ಯ ಪ್ರಸಾದ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ಭರಮಗೌಡ (ರಾಜು) ಅಲಗೌಡ ಕಾಗೆ, ಉಪಾಧ್ಯಕ್ಷರಾದ ಪೀರಸಾಬ್ ಕೌತಾಳ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗ ಎಂ., ಸೇರಿದಂತೆ ಇತರರು