ಕಲಬುರಗಿ: ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ ವೀರಪ್ಪನವರು ಸೆಂಟ್ರಲ್ ಜೈಲಿಗೆ ಭೇಟಿ ನೀಡಿದ್ದಾರೆ..
ಬೆಳ್ಳಂಬೆಳಗ್ಗೆ ಭೇಟಿ ನೀಡಿದ ಉಪಲೋಕಾಯುಕ್ತರು ಜೈಲಿನ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.. ಅಷ್ಟೇಅಲ್ಲ ಕೈದಿಗಳಿಂದ ನಡೆದ ಅಕ್ರಮ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಿದ್ದಾರೆ..
ಇದೇವೇಳೆ ಕೈದಿಗಳ ಜೊತೆಯೂ ಮಾತನಾಡಿ ಆಹಾರದ ಗುಣಮಟ್ಟವನ್ನ ಪರಿಶೀಲನೆ ನಡೆಸಿದ್ರು..