ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಕೊನೆಗೂ ಮದುವೆಯಾಗುತ್ತಿದ್ದಾರೆ. ಈ ಹಿಂದೆ ಹಲವರ ಜೊತೆ ಕೀರ್ತಿ ಸುರೇಶ್ ಹೆಸರು ಕೇಳಿ ಬಂದಿತ್ತು. ಆದರೆ ಇದೀಗ ಬಾಲ್ಯ ಸ್ನೇಹಿತನ ಜೊತೆ ಮದುವೆಯಾಗಲು ಕೀರ್ತಿ ಸುರೇಶ್ ಮುಂದಾಗಿದ್ದಾರೆ.
ಈ ಹಿಂದೆ, ಕೀರ್ತಿ ದುಬೈ ಮೂಲದ ಉದ್ಯಮಿ ಮತ್ತು ತಮಿಳು ಚಿತ್ರರಂಗದ ಸ್ಟಾರ್ ಸಂಗೀತ ಸಂಯೋಜಕರೊಂದಿಗೆ ನಟಿ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಆದರೆ, ಕೀರ್ತಿ ಮತ್ತು ಆಕೆಯ ತಂದೆ ಈ ವದಂತಿಗಳನ್ನು ಅಲ್ಲಗಳೆದಿದ್ದರು.
ಕಳೆದೆರಡು ದಿನಗಳಿಂದ ಕೀರ್ತಿ ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಾಗುತ್ತಿದೆ. ಈ ಬಾರಿ, ಡಿಸೆಂಬರ್ 11 ರಂದು ಗೋವಾದಲ್ಲಿ ಡೆಸ್ಟಿನೇಶನ್ ವೆಡ್ಡಿಂಗ್ನಲ್ಲಿ ಕೀರ್ತಿ ತನ್ನ ಬಹುಕಾಲದ ಗೆಳೆಯ ಆಂಥೋನಿ ಥಟ್ಟಿಲ್ ಅವರೊಂದಿಗೆ ವಿವಾಹವಾಗಲಿದ್ದಾರೆ ಎಂದು ಕಾಲಿವುಡ್ ವಲಯಗಳಲ್ಲಿ ಚರ್ಚೆ ಆಗುತ್ತಿದೆ. ಕೀರ್ತಿ ಮತ್ತು ಆಂಟನಿ ಕಳೆದ 16 ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
2015ರಲ್ಲಿ ಮಲಯಾಳಂ ಸಿನಿಮಾ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ ನಟಿ ಕೀರ್ತಿ ಸುರೇಶ್, ಮಹಾನಟಿ ಚಿತ್ರದ ಮೂಲಕ ತೆಲುಗು ಪ್ರೇಕ್ಷಕರಿಗೆ ತುಂಬಾ ಹತ್ತಿರವಾಗಿದ್ದಾರೆ. ಆ ನಂತರ ಕೀರ್ತಿ ಸುರೇಶ್ ವಿಭಿನ್ನ ಕ್ಯಾರೆಕ್ಟರ್ ಮಾಡುವ ಮೂಲಕ ಸ್ಟಾರ್ ಹೀರೋಯಿನ್ ಪಟ್ಟ ಗಿಟ್ಟಿಸಿಕೊಂಡರು.
ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಫೇಮಸ್ ಆಗಿರುವ ನಟಿ ಕೀರ್ತಿ ಸುರೇಶ್ ಈಗ ಬಾಲಿವುಡ್ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ. ಈಗಾಗಲೇ ಬಾಲಿವುಡ್ ನಟ ವರುಣ್ ಧವನ್ ಜೊತೆ ಬೇಬಿ ಜಾನ್ ಸಿನಿಮಾ ಮಾಡುತ್ತಿದ್ದಾರೆ. ಸ್ಟಾರ್ ಡೈರೆಕ್ಟರ್ ಅಟ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಈ ಹಿಂದೆ ಕೂಡ ನಟಿ ಕೀರ್ತಿ ಸುರೇಶ್ ಮದುವೆ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಇದೀಗ ಮತ್ತೊಮ್ಮೆ ಮಹಾನಟಿ ಮದುವೆ ಬಗ್ಗೆ ಊಹಾಪೋಹ ಶುರುವಾಗಿದೆ. ಆದ್ರೆ ಈ ಬಗ್ಗೆ ನಟಿಯ ಕುಟುಂಬದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.