ಬೆಂಗಳೂರು: ಬೆಂಗಳೂರಿನಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) ರಾತ್ರಿ ಪಂದ್ಯಾವಳಿ ನಡೆಯುತ್ತಿದ್ದು, ವೀಕ್ಷಣೆಗೆ ಬರುವವರ ಅನುಕೂಲಕ್ಕಾಗಿ ಮೆಟ್ರೋ ರೈಲು ಸಂಚಾರವನ್ನು ರಾತ್ರಿ 1.30ವರೆಗೂ ವಿಸ್ತರಿಸಲಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಾವಳಿ ನಡೆಯುತ್ತಿದ್ದು, ಆ ದಿನದಂದು ನಮ್ಮ ಮೆಟ್ರೋ ರೈಲುಗಳ ಸೇವೆಯನ್ನು ರಾತ್ರಿ 1.30ವರೆಗೂ ವಿಸ್ತರಣೆ ಮಾಡಲಾಗಿದೆ. ಆ ದಿನ ರೈಲುಗಳು ಕೆಂಪೇಗೌಡ ನಿಲ್ದಾಣದಿಂದ ( ಮೆಜೆಸ್ಟಿಕ್) ನಾಲ್ಕು ದಿಕ್ಕುಗಳಲ್ಲಿ ರಾತ್ರಿ 1.30ಕ್ಕೆ ಹೊರಡಲಿವೆ. ಇದರಿಂದ ನಗರದ ವಿವಿಧೆಡೆಯಿಂದ ಬರುವ ಕ್ರಿಕೆಟ್ ಪ್ರಿಯರಿಗೆ ಪಂದ್ಯ ಮುಗಿದ ನಂತರ ಮನೆಗೆ ತೆರಳಲು ಅನುಕೂಲವಾಗಲಿದೆ. ಈ ಉದ್ದೇಶದಿಂದ ಹೆಚ್ಚುವರಿ ಸಮಯ ನಿಗದಿಗೊಳಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ.
ಯಾವ ದಿನಾಂಕಗಳಲ್ಲಿ ರೈಲು ಸೇವೆ ವಿಸ್ತರಣೆ?
ಏಪ್ರಿಲ್ 2, 10, 17 ಹಾಗೂ 26 ರಂದು ಮತ್ತು ಮೇ 21ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ರಾತ್ರಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತವೆ. ಈ ಸಂದರ್ಭದಲ್ಲಿ ರೈಲು ಸೇವೆಯನ್ನು ವಿಸ್ತರಿಸಲಾಗಿದೆ.
ಕೊನೆಯ ನಿಲ್ದಾಣದಿಂದ 1ಗಂಟೆಗೆ ಕೊನೆಯ ರೈಲು
ಬೈಯಪ್ಪನಹಳ್ಳಿ, ಕೆಂಗೇರಿ ನಾಗಸಂದ್ರ ಮತ್ತು ರೇಷ್ಮ ಸಂಸ್ಥೆ ಈ ನಾಲ್ಕು ಕೊನೆಯ ನಿಲ್ದಾಣಗಳಿಂದ ರಾತ್ರಿ 1 ಗಂಟೆಗೆ ಕೊನೆಯ ರೈಲು ಹೊರಡಲಿದೆ. ನಾಡಪ್ರಭು ಕೆಂಪೇಗೌಡ ನಿಲ್ಯಾಣ ( ಮಜೆಸ್ಟಿಕ್) ಕೊನೆಯ ವಾಣಿಜ್ಯ ರೈಲು ಸೇವೆಯು ಎಲ್ಲಾ ನಾಲ್ಕು ದಿಕ್ಕುಗಳಿಗೆ ರಾತ್ರಿ 1.30 ಹೊರಡಲಿದೆ.
ಪೇಪರ್ ಟಿಕೆಟ್ ವಿತರಣೆ
ಯಾವುದೇ ಮೆಟ್ರೋ ರೈಲು ನಿಲ್ದಾಣದಿಂದ ಕಬ್ಬನ್ ಪಾರ್ಕ್ ಹಾಗೂ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಗೆ ಟೋಕನ್, ಕ್ಯೂಆರ್ ಟಿಕೆಟ್ ಮತ್ತು ಸ್ಮಾರ್ಟ್ ಕಾರ್ಡ್ಗಳನ್ನು ಉಪಯೋಗಿಸಿ ಪ್ರಯಾಣಿಸಬಹುದು. ನಿಲ್ದಾಣಗಳಿಂದ ಪ್ರಯಾಣಿಕರು ತ್ವರಿತವಾಗಿ ಪ್ರಯಾಣಿಸಲು ಅನುಕೂಲವಾಗುವಂತೆ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಗಳನ್ನು ಮಧ್ಯಾಹ್ನ 3.00 ಗಂಟೆಯಿಂದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ನೀಡಲಾಗುತ್ತದೆ ಎಂದು ಮೆಟ್ರೋ ನಿಗಮ ತಿಳಿಸಿದೆ.
50 ರೂಪಾಯಿ ಟಿಕೆಟ್
50 ರೂ. ದರದ ಪೇಪರ್ ಟಿಕೆಟ್ಗಳನ್ನು ನೀಡಲಾಗುತ್ತಿದ್ದು, ಆ ಟಿಕೆಟ್ ಬಳಸಿ ಕಬ್ಬನ್ ಪಾರ್ಕ್ ಹಾಗೂ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ (ಬೈಯಪ್ಪನಹಳ್ಳಿ- ಕೆಂಗೇರಿ ಮತ್ತು ನಾಗಸಂದ್ರ – ರೇಷ್ಮೆ ಸಂಸ್ಕೃ ಮಾರ್ಗದ) ಮೆಟ್ರೋ ನಿಲ್ದಾಣಕ್ಕೆ ತಲುಪಬಹುದು. ರಾತ್ರಿ 8 ಗಂಟೆ ನಂತರ ಈ ಪೇಪರ್ ಟಿಕೆಟ್ಗಳನ್ನು ಮಾನ್ಯ ಮಾಡಲಾಗುವುದು. ಈ ಪೇಪರ್ ಟಿಕೆಟ್ ಜೊತೆಗೆ ಸ್ಮಾರ್ಟ್ ಕಾರ್ಡ್, ಕ್ಯೂಆರ್ ಟಿಕೆಟ್ ಗಳನ್ನು ಬಳಸಿ ಸಾಮಾನ್ಯ ದರದಲ್ಲಿ ಪುಯಾಣಿಸಬಹುದು.
ಹೊಸ ಮೆಟ್ರೋ ಮಾರ್ಗದಲ್ಲಿ ಸೌಲಭ್ಯವಿಲ್ಲ
ಒಂದು ವಾರಗಳ ಹಿಂದೆ ಆರಂಭವಾದ ವೈಟ್ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ ನಡುವಿನ ರೈಲು ಸೇವೆಗಳನ್ನು ವಿಸ್ತರಿಸಲಾಗಿರುವುದಿಲ್ಲ ಎಂದು ಮೆಟ್ರೋ ರೈಲು ನಿಗಮ ತಿಳಿಸಿದೆ.