ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 27 ರಿಂದ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 20.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ