ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪುಟ್ಟಕ್ಕನ ಮಕ್ಕಳು’ ಧಾರವಾಹಿ ಮೂಲಕ ಖ್ಯಾತಿ ಘಳಿಸಿದ ನಟಿ ಸಂಜನಾ ಬುರ್ಲಿ ಸದ್ಯ ಧಾರವಾಹಿಯಿಂದ ಹೊರ ಬಂದಿದ್ದಾರೆ. ಈ ಮಧ್ಯೆ ನಟಿ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದು ಅವುಗಳ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಪುಟ್ಟಕ್ಕನ ಮಕ್ಕಳು ಧಾರವಾಹಿಯಲ್ಲಿ ಸಂಜನಾ ಬುರ್ಲಿ ಸ್ನೇಹಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಡಿಸಿ ಪಾತ್ರದಲ್ಲಿ ನಟಿಸುತ್ತಿದ್ದ ನಟಿ ಇದೀಗ ಧಾರವಾಹಿಯಿಂದ ಹೊರ ಬಂದಿದ್ದಾರೆ. ಸದಾ ಹೊಸ ಹೊಸ ಫೋಟೋಶೂಟ್ ಮೂಲಕ ಗಮನ ಸೆಳೆಯೋ ಸಂಜನಾ ಇದೀಗ ಪಿಂಕ್ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣ ಸ್ಕರ್ಟ್ ಧರಿಸಿ ಮಿಂಚಿದ್ದಾರೆ. ನಟಿಯ ಬೋಲ್ಡ್ ಪೋಸ್ಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.
ಇತ್ತೀಚೆಗೆ ಸಂಜನಾ ಅವರು ಡಿಸಿ ಸ್ನೇಹಾ ಪಾತ್ರಕ್ಕೆ ಗುಡ್ ಬೈ ಹೇಳಿರೋದು ಫ್ಯಾನ್ಸ್ಗೆ ಬೇಸರ ಮೂಡಿಸಿದೆ. ಆದರೆ ಸೀರಿಯಲ್ನಲ್ಲಿ ಅವರ ಪಾತ್ರದ ಸಾವಿನ ಮೂಲಕ ಅಂತ್ಯವಾಗಿದೆ. ಸಂಜನಾ ಮತ್ತೆ ಸ್ನೇಹಾ ಪಾತ್ರದಲ್ಲಿ ನಟಿಸಬೇಕು ಎಂದು ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಅಷ್ಟರ ಮಟ್ಟಿಗೆ ಸ್ನೇಹಾ ಪಾತ್ರದಲ್ಲಿ ಸಂಜನಾ ಜೀವಿಸಿದ್ದರು. ಅವರ ಪಾತ್ರ ಅಂತ್ಯವಾದ್ಮೇಲೆ ನಟಿಯ ಭಾವನ್ಮಾತಕ ಪೋಸ್ಟ್ ನೋಡಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು.
ನಮಸ್ತೆ ಪ್ರಿಯರೇ, ಎಲ್ಲಾ ಫ್ಯಾನ್ಸ್ಗೆ ನಾನು ಒಂದು ಸುದ್ದಿಯನ್ನು ಹಂಚಿಕೊಳ್ಳಲು ಇಷ್ಟಪಡುತ್ತೇನೆ. ಪ್ರತಿಯೊಂದು ದೊಡ್ಡ ವಿಷಯವೂ ಕೊನೆಗೊಳ್ಳುತ್ತದೆ. ಅದರಂತೆ ಈ ಮಹತ್ವದ ಪಾತ್ರದೊಂದಿಗೆ ನನ್ನ ಪ್ರಯಾಣವೂ ಕೊನೆಗೊಂಡಿದೆ. ‘ಪುಟ್ಟಕ್ಕನ ಮಕ್ಕಳು’ ಸೀರಿಯಲ್ನ ಸ್ನೇಹಾ ಪಾತ್ರವು ಕೊನೆಯಾಗುತ್ತಿದೆ. ಕಳೆದ 3 ವರ್ಷಗಳಿಂದ ಸ್ನೇಹಾ ಪಾತ್ರವನ್ನು ನಿರ್ವಹಿಸುವುದು ನನ್ನ ನಟನಾ ವೃತ್ತಿಜೀವನದ ಅವಿಭಾಜ್ಯ ಅಂಗವಾಗಿತ್ತು. ಈ ಸಮಯ ಎಷ್ಟು ವೇಗವಾಗಿ ಮುಗಿಯಿತು ಅನ್ನೋದೇ ಗೊತ್ತಾಗಲಿಲ್ಲ. ಈ ಸೀರಿಯಲ್ನಲ್ಲಿ ನಾನು ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದೆ. ಅದಕ್ಕಾಗಿ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ. ನನಗೆ ಈ ಉತ್ತಮ ಪಾತ್ರವನ್ನು ನೀಡಿದ್ದಕ್ಕಾಗಿ ಮತ್ತು ನನ್ನನ್ನು ಸ್ನೇಹಾ ಆಗಿ ಆಯ್ಕೆ ಮಾಡಿದ್ದಕ್ಕಾಗಿ ವಾಹಿನಿ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಹೇಳುತ್ತೇನೆ ಎಂದು ತಿಳಿಸಿದರು.
ಆದರೆ ಈಗ ನಾನು ಮುಂದುವರಿಯುವ ಸಮಯ ಬಂದಿದೆ. ಕೆಲವು ಅನಿವಾರ್ಯ ಸಂದರ್ಭಗಳು ಮತ್ತು ನನ್ನ ವೈಯಕ್ತಿಕ ಕಾರಣಗಳಿಂದಾಗಿ ನಾನು ಭಾರವಾದ ಹೃದಯದಿಂದ ಈ ಸೀರಿಯಲ್ ಅನ್ನು ತೊರೆಯುವ ಸ್ಥಿತಿ ನಿರ್ಮಾಣವಾಯಿತು. ನನ್ನ ಜೀವನದಲ್ಲಿ ಈ ಸಮಯದಲ್ಲಿ ಸಾಧಿಸಲು ನನಗೆ ಇತರ ಸವಾಲುಗಳಿವೆ. ಈ ಪ್ರಾಜೆಕ್ಟ್ನಲ್ಲಿನ ಈ ಪಾತ್ರಕ್ಕಾಗಿ ನಾನು ನಟಿನಾಗಿ ಪಡೆದ ಅಪಾರ ಪ್ರೀತಿ ಮತ್ತು ಮನ್ನಣೆಯು ನನ್ನ ದೊಡ್ಡ ಪ್ರಶಸ್ತಿ. ಅದು ನನ್ನೊಂದಿಗೆ ಶಾಶ್ವತವಾಗಿ ಉಳಿಯುತ್ತದೆ. ನಿಮ್ಮಲ್ಲಿ ಹೆಚ್ಚಿನವರು ಪಾತ್ರವು ಸಾಯುವುದನ್ನು ನೋಡಿ ದುಃಖಿತರಾಗಿದ್ದೀರಿ ಎಂದು ನನಗೆ ತಿಳಿದಿದೆ. ಆದರೆ, ನಾಯಕಿಯಾಗಿ ನಾನು ನಟಿಸಿದ್ದ ಪಾತ್ರವನ್ನು ಯಾರು ಬದಲಿಸಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ. ಅದನ್ನು ನಾವು ಪಾಸಿಟಿವ್ ಆಗಿ ತೆಗೆದುಕೊಳ್ಳೋಣ ಎಂದಿದ್ದರು. ಈ ಮಧ್ಯೆ ಹೊಸ ಫೋಟೋ ಮೂಲಕ ನಟಿ ಗಮನ ಸೆಳೆಯುತ್ತಿದ್ದಾರೆ.