ಮಿಲ್ಕಿ ಬ್ಯೂಟಿ ತಮ್ಮನ್ನಾ ಭಾಟಿಯಾ ಹಾಗೂ ವಿಜಯ್ ವರ್ಮ್ ಡೇಟಿಂಗ್ ನಲ್ಲಿದ್ದಾರೆ ಎಂದು ಈಗಾಗಲೇ ಗೊತ್ತಿಲ್ಲ. ಹೋದಲ್ಲಿ ಬಂದಲ್ಲೆಲ್ಲ ಕೈ ಕೈ ಹಿಡಿದುಕೊಂಡು ಸುತ್ತಾಡುತ್ತಿದ್ದ ಜೋಡಿ ಇದೀಗ ಮದುವೆಗೆ ರೆಡಿಯಾಗಿದ್ದಾರೆ. ಸದ್ಯದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ತಮ್ಮನ್ನಾ ಹಗೂ ವಿಜಯ್ ವರ್ಮ್ ಇದೀಗ ಹೊಸ ಮನೆ ಹುಡುಕಾಟದಲ್ಲಿ ಬ್ಯುಸಿಯಾಗಿದ್ದಾರಂತೆ.
ವಿಜಯ್ ಹಾಗೂ ತಮ್ಮನ್ನಾ ಹಸೆಮಣೆ ಏರಲು ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ ಎಂದು ಸುದ್ದಿಗಳು ಹರಿದಾಡುತ್ತಿವೆ. ತೆಲುಗು ಮೂಲಗಳ ಪ್ರಕಾರ ತಮ್ಮನ್ನಾ ಭಾಟಿಯಾ ಹಾಗೂ ವಿಜಯ್ ವರ್ಮಾ ಬರುವ ವರ್ಷ ಅಂದ್ರೆ 2025ರಲ್ಲಿ ಮದುವೆಯಾಗುವುದು ಪಕ್ಕಾ ಎನ್ನಲಾಗುತ್ತಿದ್ದು ಅದಕ್ಕೆ ಬೇಕಾದ ತಯಾರಿಯೆಲ್ಲವೂ ಈಗಿನಿಂದಲೇ ನಡೆದಿದೆಯಂತೆ. ಲ್ಯಾವಿಶ್ ಅಪಾರ್ಟ್ಮೆಂಟ್ವೊಂದರಲ್ಲಿ ಸರಿಯಾದ ಮನೆಯನ್ನು ಹುಡುಕುವುದರಲ್ಲಿ ಈ ಜೋಡಿ ನಿರತವಾಗಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ತಮ್ಮನ್ನಾ ಭಾಟಿಯಾ ಆಗಲಿ, ವಿಜಯ್ ವರ್ಮಾ ಆಗಲಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಕೇವಲ ಮೌನ ಕಾಯ್ದುಕೊಂಡಿದ್ದಾರೆ. ಇಲ್ಲಿಯವರೆಗೂ ಅವರ ಮದುವೆಯ ಬಗ್ಗೆ ಎಲ್ಲಿಯೂ ಕೂಡ ಅಧಿಕೃತವಾಗಿ ಹೇಳಿಕೊಂಡಿಲ್ಲ.